Breaking News
Home / Breaking News / ಬೆಳಗಾವಿಯಲ್ಲಿ ಚುನಾವಣಾ ಲಾಂಛನ ಬಿಡುಗಡೆ ಆಯ್ತು ನೋಡ್ರಪ್ಪಾ..ಢುಮ್… ಢುಮ್..ಢುಮುಕ್…!

ಬೆಳಗಾವಿಯಲ್ಲಿ ಚುನಾವಣಾ ಲಾಂಛನ ಬಿಡುಗಡೆ ಆಯ್ತು ನೋಡ್ರಪ್ಪಾ..ಢುಮ್… ಢುಮ್..ಢುಮುಕ್…!

ಬೆಳಗಾವಿ: ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಎಲ್ಲ ಮತದಾರರು ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಸಹಕರಿಸಬೇಕೆಂದು ಬೆಳಗಾವಿ ಉತ್ತರ ವಲಯದ ಐಜಿಪಿ ಅಲೋಕ ಕುಮಾರ್ ಅವರು ಕರೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2018 ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಅತ್ಯಂತ ಹೆಚ್ಚಿರುತ್ತದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮತದಾನ ನಡೆಯುತ್ತಿಲ್ಲ. ಜನರು ಚುನಾವಣೆಯನ್ನು ನಿರ್ಲಕ್ಷ ಮಾಡದೇ ಕಡ್ಡಾಯವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಸದೃಢಗೊಳಿಸಬೇಕೆಂದು ತಿಳಿಸಿದರು.
ಚುನಾವಣೆಯನ್ನು ಮುಕ್ತವಾಗಿ ನಡೆಸಲು ಈಗಾಗಲೇ ಮೂರು ರಾಜ್ಯಗಳ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಕ್ರಮ ಮದ್ಯ ಸಾಗಾಣಿಕೆ ಹಾಗೂ ಅಕ್ರಮವಾಗಿ ಹಣ ಸಾಗಾಟವನ್ನು ತಡೆಗಟ್ಟಲು ಸಕಲ ವ್ಯವಸ್ಥೆಯನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಅವರು ಮಾತನಾಡಿ, ಮತದಾನದಲ್ಲಿ ಸರ್ವರೂ ಪಾಲ್ಗೊಳ್ಳಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಹಾಗೂ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನ ಸಹಭಾಗಿತ್ವ (ಸಿಸ್ಟಮೆಟಿಕ್ ವೋಟರ್ಸ್ ಏಜುಕೇಷನ್ ಆ್ಯಂಡ್ ಎಲೆಕ್ಟೋರಲ್ ಪಾರ್ಟಿಸಿಪೇಶನ್) ಇದು ಸ್ವೀಪ್ ಸಮಿತಿಯ ವಿಸ್ಕøತ ರೂಪವಾಗಿದ್ದು, ಮತದಾರರು ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸುವುದು ಈ ಸಮಿತಿಯ ಕಾರ್ಯವಾಗಿದೆ ಎಂದರು.
ಒಳಗೊಳ್ಳುವ ಸುಗಮ ಮತ್ತು ನೈತಿಕ ಚುನಾವಣೆ ಎಂಬುದು ಚುನಾವಣಾ ಲಾಂಛನದ ಧ್ಯೇಯ ವಾಕ್ಯವಾಗಿದೆ. ಪ್ರತಿಶತ ಮತದಾನ ಬೆಳಗಾವಿ ಜಿಲ್ಲೆ ವಾಗ್ದಾನ ಎಂದು ತಿಳಿಸಿದರು. ಕಳೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.74 ಮತದಾನವಾಗಿದ್ದು, ಈ ಬಾರಿ ಶೇ.100 ರಷ್ಟು ಮತದಾನವಾಗಬೇಕೆಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಅವರು ಮಾತನಾಡಿ, ಹೊಸದಾಗಿ ಅರ್ಜಿ ಸಲ್ಲಿಸಿರುವ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಿ.ಸಿ. ರಾಜಪ್ಪ ಅವರು ಮಾತನಾಡಿ, ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಅಧಿಕಾರಿಗಳೊಂದಿಗೆ ಪೊಲೀಸ್ ಅಧಿಕಾರಿಗಳು ಸಹ ಕೈಜೋಡಿಸಿ, ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಗಸ್ತು ಪೊಲೀಸ್‍ರ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಎಸ್.ಬಿ. ಮುಳ್ಳಳ್ಳಿ, ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಸ್ವೀಪ್ ಸಮಿತಿಯ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಗುರುನಾಥ ಕಡಬೂರ, ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಲಕ್ಷ್ಮೀ ನಿಪ್ಪಾಣಿಕರ, ನಾಡಗೌಡ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು

Check Also

ಅಕ್ರಮ ಗೋ ಸಾಗಾಟ ; ಟ್ರಕ್ ಚಾಲಕನ ಮೇಲೆ ನೈತಿಕ ಪೊಲೀಸ್ ಗಿರಿ

ಬೆಳಗಾವಿ : ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ …

Leave a Reply

Your email address will not be published. Required fields are marked *