Breaking News
Home / Breaking News / ರಾಜ್ಯೋತ್ಸವ ಅಂದು ಜಯರಾಮ ಇಂದು ಜಿಯಾವುಲ್ಲಾ. ಹೊಸತನ ಏನೂ ಇಲ್ಲಾ…!

ರಾಜ್ಯೋತ್ಸವ ಅಂದು ಜಯರಾಮ ಇಂದು ಜಿಯಾವುಲ್ಲಾ. ಹೊಸತನ ಏನೂ ಇಲ್ಲಾ…!

,ಬೆಳಗಾವಿ- ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆ ನಡೆಯಿತು ಸಭೆಯಲ್ಲಿ ಕನ್ನಡಪರ ಹೋರಾಟಗಾರರು ಬೆಳಗಾವಿಯಲ್ಲಿ ಕನ್ನಡಪರ ವಾತಾವರಣ ಬೆಳೆಸುವ ನಿಟ್ಟಿನಲ್ಲಿ ತಮ್ಮ ವೇದನೆಯನ್ನು ಹೊರಹಾಕಿದರು
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಜಿಯಾವುಲ್ಲಾ,ಎಸ್ಪಿ ರವಿಕಾಂತೇಗೌಡ ಜಿಪಂ ಸಿಇಓ ರಾಮಚಂದ್ರನ ಡಿಸಿಪಿ ಅಮರನಾಥ ರೆಡ್ಡಿ ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು
ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಅಳವಡಿಸಬೇಕು,ಎಲ್ಲ ಸರ್ಕಾರಿ ಹಾಗು ಅನುದಾನಿತ ಶಾಲೆಗಳಲ್ಲಿ ರಾಜ್ಯೋತ್ಸವ ವನ್ನು ಕಡ್ಡಾಯವಾಗಿ ಆಚರಿಸುವಂತೆ ಕ್ರಮಕೈಗೊಳ್ಳಬೇಕು ರಾಜ್ಯೋತ್ಸವ ಆಚರಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕನ್ನಡಪರ ಹೋರಾಟಗಾರರು ಸಭೆಯಲ್ಲಿ ತಮ್ಮ ವಾದವನ್ನು ಮಂಡಿಸಿದರು
ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ ರಾಜ್ಯೋತ್ಸವದ ಮೆರವಣಿಗೆಯನ್ನು ಬೆಳಿಗ್ಗೆ 9 ಘಂಟೆಯ ಬದಲಿಗೆ ಹನ್ನೊಂದು ಘಂಟೆಗೆ ಆರಂಭಿಸಬೇಕು ಉಟದ ವ್ಯೆವಸ್ಥೆ ಬೆಳಿಗ್ಗೆ ಹನ್ನೊಂದು ಘಂಟೆಗೆ ಆರಂಭಿಸುವ ಬದಲು ಮಧ್ಯಾಹ್ನ 1-30 ಕ್ಕೆ ಆರಂಭಿಸಬೇಕು ಎಂದು ಸಲಹೆ ನೀಡಿದರು
ಕರವೇ ಜಲ್ಲಾಧ್ಯಕ್ಷ ಮಹಾದೇವ ತಳವಾರ ಮಾತನಾಡಿ ಕನ್ನಡ ಅನುಷ್ಠಾನ ಸಮೀತಿಯ ಸಭೆಯನ್ನು ನಿಗದಿತ ಸಮಯದಲ್ಲಿ ನಡೆಸಬೇಕು ನವ್ಹೆಂಬರ್ ತಿಂಗಳಪೂರ್ತಿ ನಗರದಲ್ಲಿ ಕನ್ನಡ ಬ್ಯಾನರ್ ಪೋಸ್ಟರ್ ಮತ್ತು ಕನ್ನಡ ಧ್ವಜ ಹಾರಿಸಲು ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡುವದರ ಜೊತೆಗೆ ಕನ್ನಡಪರ ವಾತಾವರಣ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು
ಎಲ್ಲರ ಸಲಹೆ ಸೂಚನೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಜಿಯಾವುಲ್ಲಾ ಈ ಬಾರಿಯ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವದು ಇದು ಕರ್ನಾಟಕ ಇಲ್ಲಿಯ ಭಾಷೆ ಕನ್ನಡ ಇಲ್ಲಿ ಕನ್ನಡ ಬೆಳೆಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರು ನೀಡಿದ ಸಲಹೆ ಸೂಚನೆಗಳನ್ನು ಅನುಷ್ಠಾನಗೊಳಿಸುತ್ತೇವೆ ಎಂದು ಭರವಸೆ ನೀಡಿದರು

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *