Breaking News
Home / Breaking News / ಉಚಗಾಂವ ಗ್ರಾಮದ ರಂಗೋಲಿಯಲ್ಲಿ ರಂಗಿದ ಲಕ್ಷ್ಮೀ ಹೆಬ್ಬಾಳಕರ

ಉಚಗಾಂವ ಗ್ರಾಮದ ರಂಗೋಲಿಯಲ್ಲಿ ರಂಗಿದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಸೋಮವಾರ ರಂಗೋಲಿಯ ರಂಗೇರಿತ್ತು ಗ್ರಾಮಸ್ಥರು ತಮ್ಮ ಮನೆಯ ಅಂಗಳದಲ್ಲಿ ರಂಗೋಲಿ ಬಿಡಿಸಿ ಲಕ್ಷ್ಮೀ ತಾಯಿ ಫೌಂಡೇಶನ್ ರೂವಾರಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ರಂಗೋಲಿಯಲ್ಲಿ ಅರಳಿಸಿ ಸ್ವಾಗತಿಸಿದ್ದು ವಿಶೇಷವಾಗಿತ್ತು
ಉಚಗಾಂವ, ಬೆಕ್ಕಿನಕೇರಿ,ಬಸೂರ್ತೆ.ಅತವಾಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಸೋಮವಾರ ಬೆಳಿಗ್ಗೆ ಲಕ್ಷ್ಮೀ ಹೆಬ್ಬಾಳಕರ ಅವರು ಉಚಗಾಂವ ಗ್ರಾಮದ ಗಣಪತಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದರು
ಉಚಗಾಂವ ಗ್ರಾಮದ ಗ್ರಾಮಸ್ಥರು ತಮ್ಮ ಮನೆಯ ಮುಂದೆ ಲಕ್ಷ್ಮೀತಾಯಿ ವೆಲ್ ಕಮ್.ಅಮಚಿ ಲಕ್ಷ್ಮೀತಾಯಿ,ಘರೋಘರಿ ಕಾಂಗ್ರೆಸ್ ,ಅಬ್ ಕೀ ಬಾರ್ ಲಕ್ಷ್ಮೀ ಬನೇಗಿ ಅಮದಾರ್ ಎನ್ನುವ ಘೋಷನೆಗಳನ್ನು ತಮ್ಮ ಮನೆಯ ಅಂಗಳದಲ್ಲಿ ರಂಗೋಲಿಯಲ್ಲಿ ಬಿಡಿಸಿದರೆ ಕೆಲವರು ಕಾಂಗ್ರೆಸ್ ಹಸ್ತದ ಗುರುತನ್ನು ಇನ್ನು ಕೆಲವರು ಲಕ್ಷ್ಮೀ ಹೆಬ್ಬಾಳಕರ ಅವರ ಭಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಎಲ್ಲರ ಗಮನ ಸೇಳೆದರು
ಗ್ರಾಮದ ಮನೆ ಮನೆಗಳಿಗೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಗ್ರಾಮದ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದ್ದು ವಿಶೇóಷವಾಗಿತ್ತು ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಮದ ಮಹಿಳೆಯರು ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳೆಯರಿಗೆ ಸ್ಪೂರ್ತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ವಿಷಯ ಮಹಿಳೆಯರಿಗೆ ಪ್ರೇರಣಾದಾಯಕವಾಗಿದೆ ಎಂದು ಹೆಬ್ಬಾಳಕರ ಅವರ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಪ್ರಶಂಸೆ ವ್ಯೆಕ್ತಪಡಿಸಿದರು
ಉಚಗಾಂವ ಗ್ರಾಮದ ಮಹಿಳೆಯರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ಸುರ್ಯೋದಯಕ್ಕೆ ಮೊದಲು ಮನೆಯ ಅಂಗಳ ಸ್ವಚ್ಛ ಮಾಡಿ ಅಂಗಳದಲ್ಲಿ ರಂಗೋಲಿ ಬಿಡಿಸಿ ತುಳಸಿಯ ಪೂಜೆ ಮಾಡುವದು ಹಿಂದೂ ಸಂಸ್ಕøತಿ ಈ ಸಂಸ್ಕøತಿ ಸಂಸ್ಕಾರ ಬೆಳೆಸುವ ಜೊತೆಗೆ ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿ ನೀಡುವ ಸಂಸ್ಕøತಿಯಾಗಿದ್ದು ಹಿಂದೂ ಧರ್ಮದ ಸಂಸ್ಕøತಿಯನ್ನು ಉಳಿಸಿ ಬೆಳೆಸುವದೇ ರಂಗೋಲಿ ಸ್ಪರ್ಧೆಯ ಉದ್ದೇಶವಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದರು
ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಪ್ರೋತ್ಸಾಹಕ ಬಹುಮಾನ ಮತ್ತು ಉಡುಗರೆಗಳನ್ನು ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ನೀಡಲಾಯಿತು

Check Also

ಸಂಜಯ ಪಾಟೀಲ ವಿರುದ್ಧ ದೂರು ದಾಖಲು…

ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ; ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ …

Leave a Reply

Your email address will not be published. Required fields are marked *