Breaking News
Home / Breaking News / ಹೆಬ್ಬಾಳಕರ ಒದಗಿಸಿದ್ರು ಬಡವರಿಗೆ ಸೂರು..ಗ್ರಾಮೀಣ ಕ್ಷೇತ್ರಕ್ಜೆ 563 ಮನೆಗಳ ಮಂಜೂರು..!!

ಹೆಬ್ಬಾಳಕರ ಒದಗಿಸಿದ್ರು ಬಡವರಿಗೆ ಸೂರು..ಗ್ರಾಮೀಣ ಕ್ಷೇತ್ರಕ್ಜೆ 563 ಮನೆಗಳ ಮಂಜೂರು..!!

ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ 563 ಮನೆಗಳ ಮಂಜೂರು

ಬೆಳಗಾವಿ- ಅವರು ಶಾಸಕಿಯೂ ಅಲ್ಲ,ಸಂಸದೆಯೂ ಇಲ್ಲ ಅವರ ಬಳಿ ಯಾವ ಅಧಿಕಾರವೂ ಇಲ್ಲ ಆದ್ರೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೋಟ್ಯಾಂತರ ರೂಪಾಯಿ ಅನುದಾನ ಮಂಜೂರು ಮಾಡಿಸಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ,563 ಮನೆಗಳನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ

ಬಸವ ವಸತಿ ಯೋಜನೆಯಡಿಯಲ್ಲಿ ವಸತಿ ಸಚಿವ ಕೃಷ್ಣಪ್ಪ ಅವರು ಲಕ್ಷ್ಮೀ ಹೆಬ್ಬಾಳಕರ ಅವರ ಶಿಫಾರಸ್ಸು ಮತ್ತು ಒತ್ತಾಯದ ಮೇರೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವಾರು ಗ್ರಾಮಗಳ ಬಡ ಕುಟುಂಬಗಳಿಗೆ ಒಟ್ಟು ,563 ಮನೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ

2017- 18 ನೇಯ ಸಾಲಿನಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ,563 ಹೆಚ್ಚುವರಿ ಮನೆಗಳನ್ನು ‌ನಿರ್ಮಿಸುವಂತೆ ಬೆಳಗಾವಿ ಜಿಲ್ಲಾಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ಪತ್ರವನ್ನು ರವಾನಿಸಿದ್ದಾರೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಅಧಿಕಾರ ಇಲ್ಲದಿದ್ದರೂ ಸರ್ಕಾರದ ಮೇಲೆ ಒತ್ತಡ ಹಾಕಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮುಸಿದ್ದೇನೆ ಕ್ಷೇತ್ರದ ಗ್ರಾಮಗಳಿಗೆ ಮಲಪ್ರಭಾ ನದಿಯಿಂದ ಕೆರೆಗಳನ್ನು ತುಂಬಿಸುವ ಯೋಜನೆಯನ್ನು ಮಂಜೂರು ಮಾಡಿಸಿದ ಬೆನ್ನಲ್ಲಿಯೇ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವಾರು ಗ್ರಾಮಗಳ 563 ಬಡ ಕುಟುಂಬಗಳಿಗೆ ಮನೆಗಳನ್ನು ಮಂಜೂರು ಮಾಡಿಸಿದ್ದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಸಂಕಲ್ಪ ಮಾಡಿದ್ದೇನೆ ಎಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ

ಅಂಬೇವಾಡಿ ಗ್ರಾಮದ ಮನೆಗಳಿಗೆ ಬೆಳಕು

ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮಕ್ಕೆ ಎರಡು ದಶಕಗಳಿಕ ಬಳಿಕ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಸುಮಾರು ಮೂರು ಲಕ್ಷ ರೂ ಖರ್ಚು ಮಾಡಿ 25 ಮನೆಗಳಿಗೆ ವಿದ್ಯತ್ತ ಸಂಪರ್ಕ ಕಲ್ಪಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *