Breaking News

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಜನದಟ್ಟಣೆ ಕಾರಣಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಿಸಲು ಸಕಲ ಸಿದ್ಧತೆ ನಡೆಯುತ್ತಿದೆ. ಆದರೆ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳ, ಸಂಚಾರ ಸಮಸ್ಯೆ ಇದೆ. ಆದ್ದರಿಂದ ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಾದ ಹುಬ್ಬಳ್ಳಿ- ಧಾರವಾಡ, ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳು ಅಭಿವೃದ್ಧಿ ಪತದಲ್ಲಿ ಸಾಗುತ್ತಿದ್ದು, ಈ ಜಿಲ್ಲೆಗಳಲ್ಲಿಯೂ ವಿಮಾನ ನಿಲ್ದಾಣಗಳಿಗೆ ಸುವ್ಯವಸ್ಥೆ ಜೊತೆಗೆ ಮೇಲ್ದರ್ಜೆಗೆರಿಸಬೇಕೆಂದು ಕೋರಿದ್ದಾರೆ.

ಇನ್ನು ವಿಮಾನ ನಿಲ್ದಾಣಗಳಿಗೆ ಸುವ್ಯವಸ್ಥೆ ಜೊತೆಗೆ ಮೇಲ್ದರ್ಜೆಗೆರಿಸಲು ಲೋಕೋಪಯೋಗಿ ಇಲಾಖೆಯಿಂದ ಬೇಕಾಗುವ ಸಹಕಾರ ನೀಡುವುದಾಗಿ ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *