ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ರೈಲನ್ನು (ನಂ.20669) ನಿಲುಗಡೆ ಮಾಡಬೇಕೆಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮನವಿ ರವಾನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ ಅವರು, ಹುಬ್ಭಳ್ಳಿಯಿಂದ ಪುಣೆಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (ನಂ.20669) ರಾಯಬಾಗ ತಾಲೂಕು ಕುಡಚಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಿದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ತಾಲೂಕಿನಿಂದ ಪುಣೆಗೆ ತೆರಳುವವರು, ಇಲ್ಲವೇ ಅಲ್ಲಿಂದ ಬೆಳಗಾವಿ ಜಿಲ್ಲೆಗೆ ಬರುವವರಿಗೆ ಅನುಕೂಲವಾಗುತ್ತದೆ ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದ್ದಾರೆ.
ಸದ್ಯ ಹುಬ್ಬಳ್ಳಿಯಿಂದ ಪುಣೆಗೆ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಕುಡಚಿ ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡುವಂತೆ ಜನರಿಂದ ಒತ್ತಾಯ ಕೇಳಿ ಬಂದಿದೆ. ಅದರಲ್ಲೂ ಮುಖ್ಯವಾಗಿ ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಇಲ್ಲಿರುವ ಜನರಿಗೆ ತಮ್ಮ ದೈನಂದಿನ ಕೆಲಸಕ್ಕಾಗಿ ಬೆಳಗಾವಿ ನಗರಕ್ಕೆ ತೆರಳಲು ಕ್ಷೇತ್ರದ ಜನರಿಂದ ಭಾರಿ ಬೇಡಿಕೆಯಿದ್ದು, ಶೀಘ್ರವೇ ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರು ರಾಯಬಾಗ ತಾಲೂಕಿನ ಕುಡಚಿ ರೈಲು ನಿಲ್ದಾಣದಲ್ಲಿ ʻವಂದೇ ಭಾರತ ರೈಲುʼ ನಿಲುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ