ಬೆಳಗಾವಿ ಮಾರ್ಚ್ 08, 2022: ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳಕಾಲ ಪ್ರವಾಸ ಕೈಗೊಂಡಿರುವ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಸ್ವಾಗತಿಸಲಾಯಿತು.
ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಮ್ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕರಿಸಿದ್ದಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ರಾಜ್ಯಪಾಲರು ಇಂದು ಸಂಜೆ 4-00 ಗಂಟೆಗೆ ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ