Breaking News

ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟನೆ

ಬೆಳಗಾವಿ, ಮಾ.೩(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ 9 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೆಲವು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಲ್ಲಿ ಸುದ್ದಿಯನ್ನು ಬಿತ್ತರಿಸಲಾಗುತ್ತಿದ್ದು, ಈ ಸುದ್ದಿಯು ಸತ್ಯಕ್ಕೆ ದೂರವಾಗಿರುತ್ತದೆ. ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ

ಪ್ರಕರಣಗಳು ಕಂಡು ಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊರೋನಾ ಪತ್ತೆಯಾಗಿರುವ ಚೀನಾ ಹಾಗೂ ಇತರ ದೇಶಗಳಿಂದ ಈವರೆಗೆ ಬೆಳಗಾವಿ ಜಿಲ್ಲೆಗೆ ಒಟ್ಟು 9 ಮಂದಿ ಮರಳಿ ಬಂದಿದ್ದು, ವೈದ್ಯಕೀಯ ತಪಾಸಣೆ ಮಾಡಲಾಗಿ ಇವರಲ್ಲಿ ಕೊರೋನಾ ರೋಗಲಕ್ಷಣಗಳು ವರದಿಯಾಗಿರುವುದಿಲ್ಲ.

ಇವರಲ್ಲಿ ಇಬ್ಬರನ್ನು ಈಗಾಗಲೇ 28 ದಿವಸಗಳ ವರೆಗೆ ನಿರಂತರವಾಗಿ ಅನುಸರಣೆ ಮಾಡಲಾಗಿರುತ್ತದೆ. ಉಳಿದ
7 ಮಂದಿಯನ್ನು ಮುಂದಿನ 28 ದಿನಗಳ ವರೆಗೆ ಅನುಸರಣೆ ಮಾಡಲಾಗುವುದು. ಯಾರನ್ನು ಗೃಹ ಬಂಧನದಲ್ಲಿ ಇರಿಸಲಾಗಿರುವುದಿಲ್ಲ. ಇವರಿಗೆ ತಮ್ಮ ಮನೆಯಲ್ಲಿಯೇ ವೈಯಕ್ತಿಕ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಲಾಗಿದೆ ಹಾಗೂ ಆರೋಗ್ಯ
ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಅವರ ಬಗ್ಗೆ ತೀವ್ರ ನಿಗಾ ಇಟ್ಟಿರುತ್ತಾರೆ ಮತ್ತು ದಿನಾಲು ಅವರ ಆರೋಗ್ಯವನ್ನು ಪರಿಶೀಲಿಸುತ್ತಿದ್ದಾರೆ.

ಮುಂದಿನ ದಿನಗಳಲ್ಲಿ, ಕೊರೊನಾ ಪೀಡಿತ ರಾಷ್ಟ್ರಗಳಿಂದ ಬರಬಹುದಾದ ಪ್ರವಾಸಿಗರ/ ಬೆಳಗಾವಿ ಜಿಲ್ಲೆಯ ನಿವಾಸಿಗಳ ವಿವರ ರಾಜ್ಯ ಕಣ್ಣಾವಲು ಘಟಕದಿಂದ ಪ್ರತೀ ನಿತ್ಯ ಇ -ಮೇಲ್ ಮುಖಾಂತರ ಜಿಲ್ಲಾ ಸಮೀಕ್ಷಾ ಘಟಕಕ್ಕೆ ಬರುತ್ತಿದ್ದು, ಈ ಎಲ್ಲಾ ಸಾರ್ವಜನಿಕ/ ಪ್ರವಾಸಿಗರನ್ನು ತುರ್ತಾಗಿ ಸಂಪರ್ಕಿಸಿ ಕೂಡಲೇ ಅವಶ್ಯಕ ಕ್ರಮಗಳನ್ನು ಜರುಗಿಸಲಾಗುವುದು.

ಜಿಲ್ಲೆಗೆ ಬಂದ ಪ್ರವಾಸಿಗರ ವಿವರಗಳ ಬಗ್ಗೆ ರಾಜ್ಯ ಕಣ್ಣಾವಲು ಘಟಕಕ್ಕೆ ಕಳುಹಿಸಿಕೊಡಲಾಗುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ 28/1/2020 ರಂದು
ಈ ಕುರಿತು ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾರ್ಗ ಸೂಚಿಯನ್ನು ನೀಡಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಕಂಡು ಅವರ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ, ಬೆಳಗಾವಿಯಲ್ಲಿ ಪ್ರತ್ಯೇಕ ಐಸೊಲೇಶನ್ ವಾರ್ಡನ ವ್ಯವಸ್ಥೆ ಮಾಡಲಾಗಿರುತ್ತದೆ.

ಕೊರೋನಾ ವೈರಸ್ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಇಲಾಖೆಯು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
****

Check Also

ಸಂಘ ದೋಷ, ಗೆಳೆಯನ ಜೊತೆ ಸೇರಿ ಗಂಡನ ಮರ್ಡರ್ ಮಾಡಲು ಸುಫಾರಿ ಕೊಟ್ಟ ಹೆಂಡತಿ…..!!!

ಬೆಳಗಾವಿ-ಅದೊಂದು ಸುಖ ಸಂಸಾರವಾಗಿತ್ತು ಸಾಲಕ್ಕಾಗಿ ಆ ಸಂಘ ಈ ಸಂಘವೆಂದು ಅಲೆದಾಡಿದ ಮನೆಯ ಯಜಮಾನಿ ಯುವಕನ ಜೊತೆ ಗೆಳೆತನ ಮಾಡಿ …

Leave a Reply

Your email address will not be published. Required fields are marked *