Breaking News
Home / Breaking News / ‘ಪದ್ಮಾವತಿ’ ಜೊತೆ ಹಸಿಬಿಸಿಯಾಗಿ ಕಾಣಿಸಿಕೊಳ್ತಾರಾ ಶಾರುಖ್.?

‘ಪದ್ಮಾವತಿ’ ಜೊತೆ ಹಸಿಬಿಸಿಯಾಗಿ ಕಾಣಿಸಿಕೊಳ್ತಾರಾ ಶಾರುಖ್.?

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರ ಸದ್ಯಕ್ಕೆ ಬಿಟೌನ್ ನಲ್ಲಿ ಒಂದಲ್ಲಾ ಒಂದು ವಿಷಯಕ್ಕೆ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ದೀಪಿಕಾ ಪಡುಕೋಣೆ ಅವರು ಫಿಕ್ಸ್ ಆಗಿದ್ದಾರಾದರೂ, ಇವರಿಗೆ ನಾಯಕನನ್ನು ಹುಡುಕುವಷ್ಟರಲ್ಲಿ ನಿರ್ದೇಶಕ ಬನ್ಸಾಲಿ ಅವರು ಸುಸ್ತಾಗಿ ಹೋಗಿದ್ದಾರೆ.
ಮೇವಾಡ ರಾಣಿ ‘ಪದ್ಮಾವತಿ’ಯ ಜೀವನದ ಕಥೆಯನ್ನಾಧರಿಸಿದ ಈ ಐತಿಹಾಸಿಕ ಚಿತ್ರದಲ್ಲಿ ಬಾಲಿವುಡ್-ಹಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ನಟಿ ದೀಪಿಕಾ ಪಡುಕೋಣೆ ಅವರು ರಾಣಿ ‘ಪದ್ಮಾವತಿ’ ಪಾತ್ರ ವಹಿಸಲಿದ್ದಾರೆ.
ಆದರೆ ‘ಪದ್ಮಾವತಿ’ ಗಂಡ ರಾಜ ರಾವಲ್ ರತನ್ ಸಿಂಗ್ ಪಾತ್ರ ವಹಿಸುವ ನಟನ ಆಯ್ಕೆಗಾಗಿ ಸಂಜಯ್ ಲೀಲಾ ಬನ್ಸಾಲಿ ಅವರು ಇಡೀ ಬಿಟೌನ್ ಸುತ್ತಾಡುತ್ತಿದ್ದಾರೆ. ಈ ಮೊದಲು ನಟ ವಿಕ್ಕಿ ಕೌಶಲ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಅವರನ್ನು ಖುದ್ದು ದೀಪಿಕಾ ಅವರೇ ಬೇಡ ಎಂದರಂತೆ.
ತದನಂತರ ನಟ ಶಾಹೀದ್ ಕಪೂರ್ ಅವರನ್ನು ಆಯ್ಕೆ ಮಾಡಲಾಯಿತು. ಆದರೆ ಕೊನೆ ಕ್ಷಣದ ಕೆಲವು ಬದಲಾವಣೆಗಳಿಂದ ಅವರು ಈ ಚಿತ್ರತಂಡದಿಂದ ಹೊರಬಿದ್ದರು.
ಇದೀಗ ಬಾಲಿವುಡ್ ನ ಖ್ಯಾತ ನಟರಿಬ್ಬರ ಹೆಸರು ಕೇಳಿ ಬರುತ್ತಿದೆ. ಯಾರು ಆ ಇಬ್ಬರು ನಟರು ಎಂಬುದನ್ನು ನೋಡಿ ಕೆಳಗಿನ ಸ್ಲೈಡ್ಸ್ ಗಳಲ್ಲಿ….

About BGAdmin

Check Also

ಅಂಬಡಗಟ್ಟಿಯಲ್ಲಿ ಗಟ್ಟಿಯಾದ ರಾಂಗ್ ನಂಬರ್ ಲವ್…!!

ಬೆಳಗಾವಿ : ಫೇಸ್ ಬುಕ್ ಲವ್….ವ್ಯಾಟ್ಸಪ್ ಡವ್….ಮಿಸ್ ಕಾಲ್ ಲವ್ ನಾವು ನೋಡಿದ್ದೇವೆ ಆದ್ರೆ ಈಗ ರಾಂಗ್ ನಂಬರ್ ಕಾಲ್ …

Leave a Reply

Your email address will not be published. Required fields are marked *