Breaking News
Home / Breaking News / ಬೆಜೆಪಿ ನಾಯಕರ ಹತ್ಯೆ, ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಬೆಜೆಪಿ ನಾಯಕರ ಹತ್ಯೆ, ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿ- ಆಣೆಕಲ್ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಎಸ್ ಎಸ್ ಟಿ ಯುವ ಘಟಕದ ಉಪಾಧ್ಯಕ್ಷ ಹರೀಶ ಕೊಲೆ ಖಂಡಿಸಿ ಸಂಸದ ಸುರೇಶ ಅಂಗಡಿ ಅವರ ನೇತ್ರತ್ವದಲ್ಲಿ ಬೆಳಗಾವಿ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ.
ಸಂಸದ ಸುರೇಶ್ ಅಂಗಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು

ರಾಜ್ಯದಲ್ಲಿ ದಲಿತ ಯುವಕರನ್ನ ಟಾರ್ಗೆಟ್ ಮಾಡಿ ಹತ್ಯೆಮಾಡಲಾಗುತ್ತಿದೆ..
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು

ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಹದಗೆಟ್ಟಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ ರಾಜ್ಯದಲ್ಲಿ ನಡೆಯುತ್ತಿರುವ ಹತ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು
ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ ಹರಕುಣಿ,ರಾಜು ಜಿಕ್ಕನಗೌಡ್ರ, ಲೀಣಾ ಟೋಪಣ್ಣವರ ಕಿರಣ ಜಾಧವ,ಜಗದೀಶ ಹಿರೇಮನಿ ಶಶಿಕಾಂತ ಪಾಟೀಲ,ಧನಂಜಯ ಜಾಧವ,ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು

About BGAdmin

Check Also

ಕಾಂಗ್ರೆಸ್ ಟಿಕೆಟ್ ಗಾಗಿ ರಮೇಶ್ ಗೆ ರಮೇಶ್ ದುಂಬಾಲು…..!!

ಬೆಳಗಾವಿ- ಲೋಕಸಭೆ ಚುನಾವಣೆ ಘೋಷಣೆಯಾಗುವ ಹೊಸ್ತಿಲಲ್ಲಿ ಆಕಾಂಕ್ಷಿಗಳ ಲಾಭಿ ಜೋರಾಗಿಯೇ ನಡೆದಿದೆ ಬೆಳಗಾವಿಯಿಂದ ಎರಡು ಬಾರಿ ಶಾಸಕರಾಗಿದ್ದ ರಮೇಶ್ ಕುಡಚಿ …

Leave a Reply

Your email address will not be published. Required fields are marked *