Breaking News
Home / Breaking News / ಬೆಳಗಾವಿ ಜಿಲ್ಲೆಯಲ್ಲಿ ಟ್ರಿಬಿನಲ್‍ಗಳ ಟ್ರಬಲ್!

ಬೆಳಗಾವಿ ಜಿಲ್ಲೆಯಲ್ಲಿ ಟ್ರಿಬಿನಲ್‍ಗಳ ಟ್ರಬಲ್!

ಬೆಳಗಾವಿ- ಬೆಳಗಾವಿಯಲ್ಲಿ ಟ್ರಿಬಿನಲ್ ಅರ್ಜಿಗಳ ವಿಲೇವಾರಿಗೆ ಟ್ರಬಲ್ ಶುರುವಾಗಿದೆ. ಗುರುವಾರ ನಡೆದ ಜಿಲ್ಲಾಧಿಕಾರಿ ಸಭೆಯಲ್ಲಿ ಇಂತಹದೊಂದು ವಿಷಯ ಚರ್ಚೆಗೆ ಗ್ರಾಸವಾಯಿತು.
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಬೆಳಗಾವಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿಲ್ಲೆಯ ಟ್ರಿಬಿನಲ್ ಹಾಗೂ ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು.
ಈ ವೇಳೆ ಬಹಳಷ್ಟು ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದುಕೊಂಡಿರುವುದರಿಂದ ಡಿಸಿ ಜಯರಾಂ ಬೆಳಗಾವಿ, ಚಿಕ್ಕೋಡಿ, ಬೈಲಹೊಂಗಲ ಉಪವಿಭಾಗಾಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಅರ್ಜಿಗಳು ಯಾವ ಕಾರಣಕ್ಕಾಗಿ ಬಾಕಿ ಉಳಿದುಕೊಂಡಿವೆ ಎಂಬ ಪ್ರಶ್ನೆಗೆ ಜಿಲ್ಲೆಯ ಎಸಿಗಳು ಸಮರ್ಪಕ ಉತ್ತರ ಕೊಡದೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸಾಕ್ಷಿದಾರರು ಬರುತ್ತಿಲ್ಲ ಹೀಗಾಗಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ಸಬೂಬು ನೀಡಿದರು.
ಇದಕ್ಕೆ ಗರಂ ಆದ ಡಿಸಿ ಅರ್ಜಿಗಳ ವಿಲೇವಾರಿ ವಿಳಂಬಕ್ಕೆ ಇದು ಸಕಾರಣ ಅಲ್ಲ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದರೆ, ಅಮಾನತು ಮಾಡಬೇಕಾಗುತ್ತದೆ ಎಂದು ಬೆಳಗಾವಿ ಉಪವಿಭಾಗಾಧಿಕಾರಿ ರಾಜಶ್ರೀ ಜೈನಾಪುರೆಯನ್ನು ತರಾಟೆಗೆ ತೆಗೆದುಕೊಂಡರು.
ಬೆಳಗಾವಿ ಜಿಲ್ಲೆಯಲ್ಲಿ ಟ್ರಿಬಿನಲ್‍ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಟ್ರಿಬಿನಲ್‍ಗಳಿಗೆ ಪರ್ಯಾಯ ಅಧಿಕಾರಿಗಳನ್ನು ನೇಮಿಸುವಂತೆ ಸಚಿವರಲ್ಲಿ ಮನವಿ ಮಾಡಲಾಗುವುದೆಂದು ಡಿಸಿ ಹೇಳಿದರು.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *