Home / Breaking News / ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ

ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ

ಬೆಳಗಾವಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಿ ರಾಜ್ಯ ಸರಕಾರದಿಂದ ಕೇಂದ್ರ ಸರಕಾರಕ್ಕೆ ಶಿಪಾರಸ್ಸು ಮಾಡಬೇಕೆಂದು ಆಗ್ರಹಿಸಿ‌ ಮಂಗಳವಾರ ಸುವರ್ಣ ಗಾರ್ಡಣ ಬಳಿ ಕರ್ನಾಟಕ ರಾಜ್ಯ ಡಾ.ಬಾಬುಜಗಜೀವನರಾಮ್ ಜನಜಾಗೃತಿ ವೇದಿಕೆ ಕಾರ್ಯಕರ್ತರು ಅರೇಬೇತಲ್ಲೆ ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜೇಷ್ಠತಾ ಮುಂಬಡ್ತಿಯನ್ನು ಸುಗ್ರಿವಾಜ್ಞೆ ಹೊರಡಿಸಿ ಯಥಾ ಸ್ಥಿತಿಯಲ್ಲಿ ಮುಂದುವರೆಸಬೇಕು. ಲಮಾಣಿ, ಕೊರಚ, ಕೊರವ ಜಾತಿಯಲ್ಲಿ ಕಾನೂನು ಬಾಹಿರವಾಗಿ ಸೇರಿಕೊಂಡಿರುವವರನ್ನು ಕೈಬಿಡಬೇಕು ಎಂದು ನ್ಯಾಯಾಲಯ ಆದೇಶ ಮಾಡಿದೆ. ಈ ಆದೇಶವನ್ನು ಸರಕಾರ ಎತ್ತಿ ಹಿಡಿಯುವಲ್ಲಿ ಸಂಪೂರ್ಣ ವಿಫಲವಾಗಿದರ ಎಂದು ಪ್ರತುಭಟನಾಕಾರರು ಆಗ್ರಹಿಸಿದ್ದಾರೆ.
ಸ್ವಾತಂತ್ರ್ಯ ಬಂದು ಏಳು ದಶಕಗಳಿಸಿದರೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಸ್ಪ್ರಶ್ಯತೆ, ಸಾಮಾಜಿಕ ನ್ಯಾಯಕೊಡಿಸುವಲ್ಲಿ ಸರಕಾರ ವಿಫಲವಾಗಿದೆ. ಇವುಗಳನ್ನು ನಿರ್ಮೂಲನೆ ಮಾಡುವುದಕ್ಕೆ ಸರಕಾರದಿಂದ ಕಡ್ಡಾಯವಾಗಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಕಟ್ಟು‌‌ ನಿಟ್ಟಿನ ಆದೇಶವನ್ನು ಹೊರಡಿಸಬೇಕು ಎಂದು ಒತ್ತಾಯಿಸಿದರು.
ಜಾತಿ ವ್ಯವಸ್ಥೆ ಮತ್ತು ಅಸ್ಪ್ರಶ್ಯತೆ ನಿರ್ಮೂಲನೆಯಾಗುವವರೆಗೆ ಮೀಸಲಾತಿ ಸೌಲಭ್ಯವನ್ನು ಮುಂದುವರೆಸಬೇಕು. ರಾಜ್ಯ ಸರಕಾರದಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಂಬೇಡ್ಕರ್ ಭವನ ಮತ್ತು ಬಾಬುಜಗಜೀವನರಾಂ ಭವನ, ಸಾವಿರಾರು ಕೋಟಿ ರು. ಅನುದಾನ ಬಿಡುಗಡೆಯಾದರೂ ಭವನಗಳು ಪೂರ್ಣಗೊಂಡಿಲ್ಲ. ಇವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲು ಆಯಾ ಜಿಲ್ಲಾಧಿಕಾರಿಗಳಿಗೆ, ಉಪನಿರ್ದೇಶಕರಿಗೆ ಸಮಾಜ ಕಲ್ಯಾಣ ಇಲಾಖೆಯವರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕೆಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಟಿ.ಪದ್ಮಾವತಿ, ದಾನಪ್ಪ ಎಚ್. ಜಿ.ಸಂಕಣ್ಣ, ತಾಯಪ್ಪ ದೊಡಮನಿ ಸೇರಿದಂತೆ ಮೊದಲಾದವರು ಹಾಜರಿದ್ದರು.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *