Home / Breaking News / ಫೆ.28, 29 ರಂದು ಬೆಳಗಾವಿಯಲ್ಲಿ ಪ್ರಾದೇಶಿಕ ಉದ್ಯೋಗ ಮೇಳ

ಫೆ.28, 29 ರಂದು ಬೆಳಗಾವಿಯಲ್ಲಿ ಪ್ರಾದೇಶಿಕ ಉದ್ಯೋಗ ಮೇಳ

ಪೂರ್ವಸಿದ್ಧತೆ ಸಭೆ: ೧೦೦ ಕ್ಕೂ ಅಧಿಕ ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆ- ಡಾ.ಬೊಮ್ಮನಹಳ್ಳಿ
—————————————————————
ನಗರದಲ್ಲಿ ಫೆ.೨೮, ೨೯ರಂದು ಪ್ರಾದೇಶಿಕ ಉದ್ಯೋಗ ಮೇಳ

ಬೆಳಗಾವಿ,  ಇದೇ ತಿಂಗಳು ೨೮ ಹಾಗೂ ೨೯ ರಂದು ಬೆಳಗಾವಿ-ಧಾರವಾಡ ಜಿಲ್ಲೆಗಳ ಪ್ರಾದೇಶಿಕ ಉದ್ಯೋಗಮೇಳವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಪ್ರಾದೇಶಿಕ ಉದ್ಯೋಗ ಮೇಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.೧೬) ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉದ್ಯೋಗಾಂಕ್ಷಿಗಳ ನೋಂದಣಿ ಸೇರಿದಂತೆ ಉದ್ಯೋಗಮೇಳದ ಕುರಿತ ವಿಶೇಷ ವೆಬ್ ಸೈಟ್ ಸಿದ್ಧಪಡಿಸಲಾಗಿದ್ದು, ಅದನ್ನು ಕೂಡ ಸದ್ಯದಲ್ಲೇ ಬಿಡುಗಡೆಗೊಳಿಸಲಾಗುವುದು.
ಇದರಿಂದ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರರನ್ನು ಆನ್ ಲೈನ್ ಮೂಲಕ ನೋಂದಣಿಗೆ ಅನುಕೂಲವಾಗಲಿದೆ ಎಂದರು.

ಉದ್ಯೋಗಮೇಳ ಸಂದರ್ಭದಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಎಲ್ಲ ತಾಲ್ಲೂಕುಗಳಿಂದ ಬಸ್ ಸೌಕರ್ಯ ಕಲ್ಪಿಸುವಂತೆ ಸೂಚನೆ ನೀಡಿದರು.
ಪಾರ್ಕಿಂಗ್, ರಸ್ತೆ ಸಂಚಾರ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ‌ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ತುರ್ತು ವೈದ್ಯಕೀಯ ಸೌಲಭ್ಯ ನೀಡಲು ಅಂಬ್ಯುಲೆನ್ಸ್ ವ್ಯವಸ್ಥೆ ಒದಗಿಸಬೇಕು; ನಿರಂತರ ವಿದ್ಯುತ್ ಸೌಲಭ್ಯ ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.

ವಿವಿಧ ಕಂಪೆನಿಗಳ ೧೦೦ ರಿಂದ ೧೫೦ ಉದ್ಯೋಗದಾತರು ಭಾಗವಹಿಸುವ ನಿರೀಕ್ಷೆಯಿದ್ದು, ಮೂಲಸೌಕರ್ಯಗಳನ್ನು ಒದಗಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ದೊಡ್ಡಬಸವರಾಜ್ ಅವರು ಸಭೆಯಲ್ಲಿ ವಿವರಿಸಿದರು.

ಖಾಸಗಿ ಬ್ಯಾಂಕುಗಳನ್ನು ಕೂಡ ಆಹ್ವಾನಿಸಲಾಗುವುದು.‌ ಐಟಿಐ, ಪದವಿ, ಪದವಿಪೂರ್ವ, ಎಂಜಿನಿಯರಿಂಗ್ ಕಾಲೇಜುಗಳು, ಎಂ.ಬಿ.ಎ. ವಿದ್ಯಾರ್ಥಿಗಳು ಮತ್ತು ವಸತಿನಿಲಯದ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಲು ಕ್ರಮ ವಹಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್., ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಹಾಗೂ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
***

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *