Home / Breaking News / ಬೆಳಗಾವಿಯ ಇಬ್ಬರು ಕರೋನಾ ಶಂಕಿತರ, ಗಂಟಲು ದ್ರವದ ಮಾದರಿ, ಬೆಂಗಳೂರು ಪ್ರಯೋಗಾಲಯಕ್ಕೆ

ಬೆಳಗಾವಿಯ ಇಬ್ಬರು ಕರೋನಾ ಶಂಕಿತರ, ಗಂಟಲು ದ್ರವದ ಮಾದರಿ, ಬೆಂಗಳೂರು ಪ್ರಯೋಗಾಲಯಕ್ಕೆ

ಜಿಲ್ಲೆಯಲ್ಲಿ ೧೧೮ ಜನರ ಮೇಲೆ ನಿಗಾ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ

ಬೆಳಗಾವಿ,  ಜಿಲ್ಲೆಗೆ ವಿದೇಶದಿಂದ ಇದುವರೆಗೆ ೧೩೪ ಜನರು ಆಗಮಿಸಿದ್ದು, ಅದರಲ್ಲಿ ಮೂರು ಜನರು ೨೮ ದಿನಗಳ ಕ್ವಾರಂಟೈನ್(ಗೃಹ ನಿಗಾ) ಅವಧಿ ಪೂರ್ಣಗೊಳಿಸಿದ್ದಾರೆ. ಯಾವುದೇ ಪ್ರಕರಣದಲ್ಲೂ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಒಟ್ಟು ೧೧೮ ಜನರನ್ನು ಅವರವರ ಮನೆಯಲ್ಲಿಯೇ ನಿಗಾದಲ್ಲಿರಿಸಲಾಗಿದೆ.
೧೭ ಜನರು ೧೪ ದಿನಗಳ ಕ್ವಾರಂಟೈನ್ ಅವಧಿಯನ್ನು ಈಗಾಗಲೇ ಪೂರ್ಣಗೊಳಿಸಿದ್ದಾರೆ.

ಇದುವರೆಗೆ ಒಟ್ಟು ಇಬ್ಬರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ವರದಿಯನ್ನು ನಿರೀಕ್ಷಿಸಲಾಗಿದೆ ಎಂದು‌ ಅವರು ತಿಳಿಸಿದ್ದಾರೆ.

ಸಂಪೂರ್ಣ ಸ್ಕ್ರೀನಿಂಗ್:

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರ ಸ್ಕ್ರೀನಿಂಗ್ (ತಪಾಸಣೆ) ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಅದೇ ರೀತಿ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ಆರೋಗ್ಯವನ್ನು ಕೂಡ ರೈಲು ನಿಲ್ದಾಣದಲ್ಲಿ ಕೂಡ ತಪಾಸಣೆ ನಡೆಸಲಾಗುತ್ತಿದೆ.
ಜಿಲ್ಲೆಯ ಗಡಿಯಲ್ಲಿ ಗೋವಾ ಮತ್ತು ಮಹಾರಾಷ್ಟ್ರ ದಿಂದ ಬಸ್ ನಲ್ಲಿ ಆಗಮಿಸುವ ಪ್ರಯಾಣಿಕರನ್ನು ಕೂಡ ಆರೋಗ್ಯ ಇಲಾಖೆಯ ತಂಡಗಳು ತಪಾಸಣೆ ನಡೆಸುತ್ತಿವೆ.
ಬಸ್ ನಿಲ್ದಾಣದಲ್ಲೂ ತಪಾಸಣಾ ಕಾರ್ಯ ನಡೆದಿದೆ.

ಸರಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಸ್ಕ್ರೀನಿಂಗ್ ಕೂಡ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
***

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *