Breaking News
Home / Breaking News / ಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ: ಡಿಸಿಎಂ ಸವದಿ

ಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ: ಡಿಸಿಎಂ ಸವದಿ

 

KSRTC, BMTC, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆ ಮಾಡಿದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ.

ಲಕ್ಷ್ಮಣ ಸಂ. ಸವದಿ
ಉಪ ಮುಖ್ಯಮಂತ್ರಿಗಳು, ಸಾರಿಗೆ ಇಲಾಖೆ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *