Home / Breaking News / ಬೆಳಗಾವಿಯಲ್ಲಿ ಶಾಸಕಿ ಅಂಜಲಿ ಭಾವಚಿತ್ರಕ್ಕೆ ಬೆಂಕಿ…..

ಬೆಳಗಾವಿಯಲ್ಲಿ ಶಾಸಕಿ ಅಂಜಲಿ ಭಾವಚಿತ್ರಕ್ಕೆ ಬೆಂಕಿ…..

ಬೆಳಗಾವಿ- ಮನಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಪ್ರತಿಮೆಯ ಕುರಿತು ನಡೆದ ಘಟನೆಯ ಸತ್ಯಾ ಸತ್ಯತೆಯನ್ನು ತಿಳಿದುಕೊಳ್ಳದೇ ಕರ್ನಾಟಕ ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯೆಕ್ತ ಪಡಿಸಿದರು.

ಬೆಳಗಾವಿಯ ಕನ್ನಡ ಸಾಹಿತ್ಯಭವನ ದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕರವೇ ಕಾರ್ಯಕರ್ತರು ಶಾಸಕಿ ಅಂಜಲಿ ನಿಂಬಾಳ್ಕರ್ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು,ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟಿಸಿಸರು.

ಈ ಸಂಧರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಸರ್ಕಾರದ ಪ್ರತಿನಿಧಿಯಾಗಿ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಉಂಡು ಮನೆಗೆ ದ್ರೋಹ ಬಗೆದಿದ್ದಾರೆ.ಛತ್ರಪತಿ ಶಿವಾಜಿ ಮಹಾರಾಜರಿಗೆ ಕರ್ನಾಟಕ ಸರ್ಕಾರ ಅಪಾರ ಗೌರವ ನೀಡಿದೆ.ಕರ್ನಾಟಕ ನೀಡಿದಷ್ಟು ಗೌರವವನ್ನು ಮಹಾರಾಷ್ಟ್ರ ಸರ್ಕಾರವೂ ಕೊಟ್ಟಿಲ್ಲ,ಮನಗುತ್ತಿಯಲ್ಲಿ ನಡೆದ ಘಟನೆಯಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ,ಸರ್ಕಾರದ ವಿರುದ್ಧ ಟ್ವೀಟ್ ಮಾಡಿರುವ ಅಂಜಲಿ ನಿಂಬಾಳ್ಕರ್ ಬಹಿರಂಗ ಕ್ಷಮೆಯಾಚಿಸದಿದ್ದರೆ ಕರವೇ ಕಾರ್ಯಕರ್ತರು ಅವರ ಮನೆ ಎದರು ಧರಣಿ ಮಾಡಬೇಕಾಗುತ್ತದೆ ಎಂದು ದೀಪಕ ಎಚ್ಚರಿಕೆ ನೀಡಿದರು.

ಕರ್ನಾಟಕ ಸರ್ಕಾರ ಗಡಿಭಾಗದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಗೆ ಕೋಟ್ಯಾಂತರ ರೂ ಅನುದಾನ ಕೊಟ್ಟಿದೆ.ಬೆಳಗಾವಿ ಗ್ರಾಮೀಣದಲ್ಲೂ ಅತೀ ಎತ್ತರದ ಶಿವಾಜಿ ಮೂರ್ತಿ ಪ್ರತಿಷ್ಠಾಪನೆಗೆ ಅನುದಾನ ನೀಡಿದ್ದು,ಶಿವಾಜಿ ಮಹಾರಾಜರಿಗೆ ಗೌರವ ನೀಡುವ ವಿಷಯದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಂದ ಪಾಠ ಕಲಿಯಬೇಕಾಗಿಲ್ಲ,ಕರ್ನಾಟಕ ಸರ್ಕಾರ ಕ್ಷಮೆಯಾಚಿಸಲಿ ಎಂದು ಟ್ವೀಟ್ ಮಾಡಿರುವ ಶಾಸಕಿ ಅಂಜಲಿ ನಿಂಬಾಳ್ಕರ್ ಬಹಿರಂಗ ಕ್ಷಮೆಯಾಚಿಸುವವರೆಗೂ ಕರವೇ ಹೋರಾಟ ಮಾಡುತ್ತದೆ ಎಂದು ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸಂಚಾಲಕ ಮಹಾದೇವ ತಳವಾರ,ದಶರಥ ಬನೋಶಿ,ಆರೋಗ್ಯಪ್ಪಾ ಪಾದನಕಟ್ಟಿ,ಸುರೇಶ ಗವಣ್ಣವರ,ರಾಮಾ ವಣ್ಣೂರ,ಗಣೇಶ ರೋಕಡೆ,ಹೊಳೆಪ್ಪಾ ಸುಲದಾಳ,ವಿಜಯ ಹಲಕರ್ಣಿ,ಸಂಪತ್ತ್ ಸಕ್ರೆನ್ನವರ,ಸತೀಶ್ ಗಾಡಿವಡ್ಡರ್,ರಮೇಶ್ ಯರಗಣ್ಣವರ,ಕಿರಣ ಚವ್ಹಾಣ ಸೇರಿದಂತೆ ಕರವೇ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *