Breaking News
Home / Breaking News / ಬೇಡ,ಬೇಡ ಅಂದ್ರೂ ಬೆಂಕಿ ಹಚ್ಚೇ ಬಿಟ್ರು…!!!

ಬೇಡ,ಬೇಡ ಅಂದ್ರೂ ಬೆಂಕಿ ಹಚ್ಚೇ ಬಿಟ್ರು…!!!

ಬೆಳಗಾವಿ- ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ,ಕನ್ನಡಪರ ಸಂಘಟನೆಗಳ ಕುರಿತು ರೋಲ್ ಕಾಲ್ ಸಂಘಟನೆಗಳೆಂದು ಹೇಳಿಕೆ ನೀಡಿ ಅವಮಾನಿಸಿರುವದನ್ನು ಖಂಡಿಸಿ,ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದರು.

ಕನ್ನಡ ಪರ ಸಂಘಟನೆಗಳ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿರುವದನ್ನು ವಿರೋಧಿಸಿ.
ಬೆಳಗಾವಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಯಿತು. ಬೆಳಗಾವಿಯ ಅಶೋಕ ಸರ್ಕಲ್ ನಲ್ಲಿ ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದರು.

ಯತ್ನಾಳ ವಿರುದ್ಧ ಘೋಷಣೆ ಕೂಗಿದ ಕರವೇ ಕಾರ್ಯಕರ್ತರು. ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ, ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಧರಣಿ ನಡೆಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಬಸನಗೌಡ ಪಾಟೀಲ ಯತ್ನಾಳರು ಹಿಂದುತ್ವದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುವ ರಾಜಕಾರಣಿ, ಮಂತ್ರಿ ಸ್ಥಾನ ಸಿಗದೇ ಇರುವದಕ್ಕೆ ಮಾನಸಿಕವಾಗಿ ಅಸ್ವಸ್ಥರಾಗಿರುವ ಅವರು ನಾಲಿಗೆಯ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ,ಕನ್ನಡಪರ ಹೋರಾಟಗಾರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಬಸನಗೌಡ ಪಾಟೀಲ ಯತ್ನಾಳ ಅವರು ಬ್ಲ್ಯಾಕ್ ಮಾಡಿಯೇ ಅಧಿಕಾರ ಪಡೆದುಕೊಂಡಿದ್ದಾರೆ,ಈಗ ಮಂತ್ರಿಯಾಗಲು ಮುಖ್ಯಮಂತ್ರಿಗಳನ್ನು ಓಲೈಸಲು ಕನ್ನಡ ಸಂಘಟನೆಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿರುವ ಯತ್ನಾಳರಿಂದ ಕನ್ನಡಿಗರು ಪಾಠ ಕಲಿಯುವ ಅಗತ್ಯವಿಲ್ಲ,ಯತ್ನಾಳ ಎಲ್ಲಿ ಹೋದರೂ ಕರವೇ ಕಾರ್ಯಕರ್ತರು ಅವರಿಗೆ ಕಪ್ಪು ಬಾವುಟ ತೋರಿಸುತ್ರಾರೆ ಎಂದು ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ರು.

ಕರವೇ ಕಾರ್ಯಕರ್ತರು ಯತ್ನಾಳರ ಪ್ರತಿಕೃತಿ ದಹಿಸಲು ಮುಂದಾದಾಗ ಪೋಲೀಸರು ಅದನ್ನು ತಡೆಯಲು ಯತ್ನಿಸಿದರು,ಬೇಡ,ಬೇಡ ಅಂದ್ರೂ ಬೆಂಕಿ ಹಚ್ಚಿದ ಕರವೇ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ರು.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *