Home / Breaking News / ನೀವೇ ಸ್ಪರ್ದೆ ಮಾಡಿ,ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಾಯಕರ ಪಟ್ಟು…!!!

ನೀವೇ ಸ್ಪರ್ದೆ ಮಾಡಿ,ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಾಯಕರ ಪಟ್ಟು…!!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ  ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯುತ್ತಿದೆ.

ಇಂದು ಬೆಳಿಗ್ಗೆ 11 ಟೆಯಿಂದ ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.ಸತೀಶ್ ಜಾರಕಿಹೊಳಿ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಬೇಕು,ಎಂದು ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದು,ಅವರನ್ನು ಮನವೊಲಿಸಲು ಕಾಂಗ್ರೆಸ್ ನಾಯಕರು ಸಭೆಯನ್ನು ಮುಂದುವರೆಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರು ಸ್ಪರ್ದೆ ಮಾಡಲು ಒಪ್ಪದಿದ್ದರೆ,ಸತೀಶ್ ಜಾರಕಿಹೊಳಿ,ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಶಿಫಾರಸು ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಚ್ 23 ರಿಂದ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಶುರುವಾಗಲಿದ್ದು ಅಷ್ಟರೊಳಗೆ ಕಾಂಗ್ರೆಸ್ ಮತ್ತು ಬಿಜೆಪಿ,ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾದ್ಯತೆ ಇದೆ.

ಕಾಂಗ್ರೆಸ್ ಪಕ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪರ್ದೆ ಮಾಡಿದ್ರೆ ,ಬಿಜೆಪಿಗೆ ಪ್ರಬಲ ಸ್ಪರ್ದೆಯೊಡ್ಡಬಹುದು ಎನ್ನುವದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಆಗಿದೆ.

ಈಗ ಸದ್ಯಕ್ಕೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಸಭೆ ಮದುವರೆದಿದ್ದು,ಕೆಲವೇ ಕ್ಷಣಗಳಲ್ಲಿ ಅಂತಿಮ ತೀರ್ಮಾಣ ಹೊರಬೀಳುವ ಸಾಧ್ಯತೆ ಇದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *