Home / Breaking News / ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ವಿಜ್ಞಾನಿ….

ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ವಿಜ್ಞಾನಿ….

ಬೆಳಗಾವಿ- ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಜೆ. ಮಂಜಣ್ಣ ಅವರಿಗೆ ಸ್ಥಾನ ಸಿಕ್ಕಿರುವದು ಬೆಳಗಾವಿಯ ಹೆಮ್ಮೆ…

ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರೊ. ಜೆ. ಮಂಜಣ್ಣ ಸ್ಥಾನ ಪಡೆದಿದ್ದಾರೆ.
ಎಲ್ಸೇವಿಯರ್ ಸಂಸ್ಥೆಯ ಸಹಯೋಗದಲ್ಲಿ ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ ಬೋಯಾಕ್ ಮತ್ತು ಜಾನ್ ಪಿ.ಎ. ಇವೋನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿಶ್ವದ ಸಂಶೋಧಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಸಂಶೋಧನಾ ತಂಡವು ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದೆ.
2021ರ ಸಾಲಿನ ಕರ್ನಾಟಕ ರಾಜ್ಯದ 18 ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಮಂಜಣ್ಣಾರವರು ಸ್ಥಾನಪಡೆದಿರುವರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಇವರು 85 ಅಂತರಾಷ್ಟ್ರೀಯ ಜರನಲ್ ಪೇಪರ್ಸಗಳನ್ನು ಪ್ರಕಟಿಸಿದ್ದಾರೆ ಮತ್ತು 3 ಪೇಟೆಂಟ್ (ಒಂದು ಜಪಾನ್ ಮತ್ತು ಎರಡು ಭಾರತೀಯ)ಗಳನ್ನು ಹೊಂದಿದ್ದಾರೆ. ಇವರಿಗೆ 2000 ರಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಕೆಮಿಸ್ಟ್ಸ್‍ಯಿಂದ ಹಾಗೂ 2012 ರಲ್ಲಿ ವಿಜನ್ ಗ್ರೂಪ್ ಆನ್ ಸೈನ್ಸ್ ಆ್ಯಂಡ್ ಟೆಕ್ನಾಲಾಜಿ, ಕರ್ನಾಟಕ ಸರ್ಕಾರದಿಂದ ಯಂಗ್ ಸೈಂಟಿಸ್ಟ್ ಪ್ರಶಸ್ತಿ, 6 ಬಾರಿ ರಾಷ್ಟ್ರೀಯ ಸಮ್ಮೇಳನಗಳಲ್ಲಿ ಬೆಸ್ಟ್ ಪೇಪರ ಪ್ರಶಸ್ತಿ ದೊರೆತಿವೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *