Home / Breaking News / ಬಸನಗೌಡ ಯತ್ನಾಳ ಧಿಡೀರ್ ಬೆಳಗಾವಿಗೆ ಬಂದಿದ್ದು ಯಾಕೆ ಗೊತ್ತಾ..??

ಬಸನಗೌಡ ಯತ್ನಾಳ ಧಿಡೀರ್ ಬೆಳಗಾವಿಗೆ ಬಂದಿದ್ದು ಯಾಕೆ ಗೊತ್ತಾ..??

ಇಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ನಾಯಕರ ಮಹತ್ವದ ಸಭೆ..

ಬೆಳಗಾವಿ-2 ಎ ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಸಮಾಜ ನಿರಂತರವಾಗಿ ಹೋರಾಟ ನಡೆಸಿದ್ದು ಸರ್ಕಾರ ಬೆಳಗಾವಿಯ ಅಧಿವೇಶನದಲ್ಲಿ ಪ್ರಕಟಿಸಿದ ಮೀಸಲಾತಿ ಕುರಿತು ಚರ್ಚಿಸಲು ಪಂಚಮಸಾಲಿ ಸಮಾಜದ ನಾಯಕರು ಇಂದು ಬೆಳಗಾವಿಯಲ್ಲಿ ಮಹತ್ವ ಸಭೆ ನಡೆಸಲಿದ್ದಾರೆ.

ಬೆಳಗಾವಿಯ ಗಾಂಧೀ ಭವನದಲ್ಲಿ, ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಬೆಳಗ್ಗೆ 11ಕ್ಕೆ ಆರಂಭವಾಗಲಿರುವ ಸಭೆಯಲ್ಲಿ,ಕೂಡಲಸಂಗಮ ‌ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಬಸವನಗೌಡ ಪಾಟೀಲ ಯತ್ನಾಳ,ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ದೊಡ್ಡಗೌಡರ, ಚನ್ನರಾಜ್ ಹಟ್ಟಿಹೊಳಿ,ಮಾಜಿ ಸಚಿವರಾದ ವಿನಯ ಕುಲಕರ್ಣಿ, ಎ.ಬಿ ಪಾಟೀಲ, ಪ್ರಕಾಶ ಹುಕ್ಕೇರಿ, ವಿಜಯಾನಂದ ಕಾಶಪ್ಪನವರ ಭಾಗವಹಿಸಲಿದ್ದಾರೆ.

ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.2ಡಿ ಪ್ರವರ್ಗ ರಚನೆ ಪಂಚಮಸಾಲಿ ‌ಹೋರಾಟಕ್ಕೆ ಸಿಕ್ಕ ನ್ಯಾಯವೋ? ಅನ್ಯಾಯವೋ? ಎನ್ನುವದರ ಬಗ್ಗೆ,ಕಾರ್ಯಕಾರಣಿಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಬೆಳಗಾವಿ ಮಹಾನಗರ ಈಗ ಪಂಚಮಸಾಲಿ ಸಮಾಜದ ಹೋರಾಟದ ಮುಖ್ಯಕೇಂದ್ರವಾಗಿದ್ದು,ಇಂದು ಬೆಳಗ್ಗೆ 11-00 ಗಂಟೆಯಿಂದ ಬೆಳಗಾವಿಯ ಗಾಂಧಿ ಭವನದಲ್ಲಿ ಪಂಚಮಸಾಲಿ ಸಮಾಜದ ಕಾರ್ಯಕಾರಿಣಿ ಸಭೆ ನಡೆಸಿದ ಬಳಿಕ ಮಧ್ಯಾಹ್ನ 2-00 ಗಂಟೆಗೆ ನಾಯಕರು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಕುರಿತು ಸಮಾಜದ ನಿಲುವು ಪ್ರಕಟಿಸುವ ಸಾಧ್ಯತೆ ಇದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *