Breaking News
Home / Breaking News / ಬೆಳಗಾವಿಯಿಂದ ಇಬ್ಬರ ಗಡಿಪಾರು !

ಬೆಳಗಾವಿಯಿಂದ ಇಬ್ಬರ ಗಡಿಪಾರು !

ಬೆಳಗಾವಿ :ನಗರದಲ್ಲಿ ಅಕ್ರಮ ಚಟುವಟಿಕೆಗಳಾದ ಮಟಕಾ, ಅಕ್ರಮ ಸಾರಾಯಿ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಗಳ ಮೇಲೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಉಪವಿಭಾಗದ ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯ ಬಾದರವಾಡಿ ಗ್ರಾಮದ ಲಕ್ಷಣ @ ಬಾಳು ಸಾತೇರಿ ಪಾಟೀಲ ಹಾಗೂ ಮಾರಿಹಾಳ ಠಾಣೆ ವ್ಯಾಪ್ತಿಯ ಹುದಲಿ ಗ್ರಾಮದ ನಾಗಪ್ಪ ಶಾಂತಪ್ಪ ಬಾಗರಾಯಿ ಇವರ ಮೇಲೆ ಸಂಬಂಧಿಸಿದ ಠಾಣೆಗಳ ಠಾಣಾಧಿಕಾರಿಗಳ ವರದಿಯನ್ನು ಆಧರಿಸಿ ಕೊನೆಗೂ ಬಂಧಿಸಿ ಗಡಿಪಾರು ಮಾಡಿದ್ದಾರೆ.

ಎ.ಸಿ.ಪಿ ಬೆಳಗಾವಿ ಗ್ರಾಮೀಣ ಉಪವಿಭಾಗ ಅವರ ಶಿಫಾರಸ್ಸಿನಂತೆ ರವೀಂದ್ರ ಗಡಾದಿ , ಐಪಿಎಸ್ , ಉಪಪೊಲೀಸ್ ಆಯುಕ್ತರು ( ಕಾ & ಸು ) ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು , ಬೆಳಗಾವಿ ರವರು ಬೆಳಗಾವಿ ಜಿಲ್ಲೆಯಿಂದ ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಗಡಿಪಾರು ಆದೇಶ ಹೊರಡಿಸಿ ಗಡಿಪಾರು ಆದೇಶವನ್ನು ಜಾರಿಗೊಳಿಸಲಾಗಿರುತ್ತದೆ . ಇವರಿಗೆ ಗಡಿಪಾರು ಮಾಡುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುವ ಸಮಾಜಘಾತುಕರಿಗೆ ಎಚ್ಚರಿಕೆ ನೀಡಿದಂತಾಗಿದೆ.
ಈ ತರಹದ ಮಟಕಾ ಜೂಜಾಟ, ಅಕ್ರಮ ಸಾರಾಯಿ ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ .

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *