Breaking News
Home / Breaking News / ಬೆಳಗಾವಿ: ಭೀಕರ ಅಪಘಾತಕ್ಕೆ ಇಬ್ಬರು ಬಲಿ.

ಬೆಳಗಾವಿ: ಭೀಕರ ಅಪಘಾತಕ್ಕೆ ಇಬ್ಬರು ಬಲಿ.

ಹುಕ್ಕೇರಿ :ಹುಕ್ಕೇರಿ-ಬೆಳಗಾವಿ ರಸ್ತೆಯಲ್ಲಿ ಬಸ್ ಓವರ್ ಟೇಕ್ ಮಾಡುವ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ಇಂದು ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ.

ಜಯಪಾಲ್ ಸಕಲಕ್ಕನವರ- ಜಯಶ್ರೀ ಎಂಬುವವರು ಮೃತಪಟ್ಟಿದ್ದಾರೆ.ಹುಕ್ಕೇರಿ-ಬಡಕುಂದ್ರಿ ನಡುವೆ ಈ ದುರ್ಘಟನೆ ಸಂಭವಿಸಿದೆ.ಹುಕ್ಕೇರಿಯಿಂದ ಬೆಳಗಾವಿ ಕಡೆಗೆ ಎಕ್ಸ್ ಯು ವಿ ಕಾರು ವೇಗವಾಗಿ ಸಾಗುತ್ತಿತ್ತು. ಬೆಳಗಾವಿಯಿಂದ ಅಥಣಿಯತ್ತ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ವಿಫ್ಟ್ ಕಾರಲ್ಲಿದ್ದವರು ಕೊನೆಯುಸಿರೆಳೆದಿದ್ದಾರೆ. ಇನ್ನೂ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದರು.

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *