Home / Breaking News / ಮಂಗಳವಾರ, ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವದು ಯಾಕೆ ಗೊತ್ತಾ..??

ಮಂಗಳವಾರ, ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವದು ಯಾಕೆ ಗೊತ್ತಾ..??

ಬೆಳಗಾವಿ – ಮಂಗಳವಾರ ಬೆಳಗಾವಿಯಲ್ಲಿ ಬೆಳಗಾವಿ ನಗರ,ಮತ್ತು ಗ್ರಾಮೀಣ ಘಟಕದ ಕಾರ್ಯಕರ್ತರು ಬೆಳಗಾವಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಅನ್ನಭಾಗ್ಯ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡದೇ ಇರುವದನ್ನು ಖಂಡಿಸಿ ಮಂಗಳವಾರದಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ,ಅವರ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.ಈ ಪ್ರತಿಭಟನೆಯಲ್ಲಿ ಬೆಳಗಾವಿ ಜಿಲ್ಲೆಯ ಸಮಸ್ತ ಕಾಂಗ್ರೆಸ್ ಕಾರ್ಯಕರ್ತರು,ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಳಗಾವಿ ನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಾಸಕ ರಾಜು ಸೇಠ,ಬೆಳಗಾವಿ ಗ್ರಾಮೀಣ ಜಿಕಗಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.

ಮಂಗಳವಾರ ಬೆಳಗ್ಗೆ 11-00 ಗಂಟೆಗೆ ಸಮಯಕ್ಕೆ ಸರಿಯಾಗಿ ನಗರದ ಕನ್ನಡ ಸಾಹಿತ್ಯಭವನದಲ್ಲಿ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶಗೊಳ್ಳುವಂತೆ ವಿನಂತಿಸಲಾಗಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *