Home / Breaking News / ಬೆಳಗಾವಿಯಲ್ಲಿ ಕಾಂಗ್ರೆಸ್ ಬಿಜೆಪಿ ಟಕ್ಕರ್…!!!

ಬೆಳಗಾವಿಯಲ್ಲಿ ಕಾಂಗ್ರೆಸ್ ಬಿಜೆಪಿ ಟಕ್ಕರ್…!!!

ಬೆಳಗಾವಿ- ಕೇಂದ್ರ ಸರ್ಕಾರದ ಅಕ್ಕಿ ರಾಜಕಾರಣ ಖಂಡಿಸಿ ಇಂದು ಮಂಗಳವಾರ ಬೆಳಗ್ಗೆ 11-00 ಗಂಟೆಗೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಇವತ್ತು ಚನ್ನಮ್ಮ ವೃತ್ತದಲ್ಲಿ 10-30 ಕ್ಕೆ ಬೆಳಗಾವಿಯ ಬಿಜೆಪಿ ನಾಯಕರು ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದು ಸೇಮ್ ಪ್ಲೇಸ್ ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಪ್ರತಿಭಟನೆಗಳ ಟಕ್ಕರ್ ಆಗಲಿದೆ.

ಬೆಳಗಾವಿಯಲ್ಲಿ ವಿದ್ಯುತ್ ಬಿಲ್ ಡಬಲ್ ಆಗಿರುವದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನ ಭಾಗ್ಯ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಸೆಡ್ಡು ಹೊಡೆಯಲಿದೆ.

ಒಟ್ಟಾರೆ ಇವತ್ತು ಹತ್ತು ಗಂಟೆಯ ನಂತರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆಗಳ ಸಂಗಮವಾಗುವ ಸಾಧ್ಯತೆಗಳಿವೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *