Home / Breaking News / ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಹೈಜಾಕ್….!!

ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಹೈಜಾಕ್….!!

ಬೆಳಗಾವಿಯಲ್ಲಿ ನಿಗದಿಯಾಗಿದ್ದ ಗೃಹಲಕ್ಷ್ಮೀ ಯೋಜನೆಯ ಮುಖ್ಯ ಕಾರ್ಯಕ್ರಮ ಏಕಾಏಕಿ ಬೆಳಗಾವಿಯಿಂದ ಮೈಸೂರಿಗೆ ಹೈಜಾಕ್ ಆಗಿದೆ.ಈ ಯೋಜನೆಯ ಅನುಷ್ಠಾನದ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶ್ರಮಿಸುವ ಮೂಲಕ ಪಾಪ್ಯುಲರ್ ಆಗಿದ್ರು,ಬೆಳಗಾವಿಯಲ್ಲಿ ಈ ಕಾರ್ಯಕ್ರಮ ನಡೆದ್ರೆ ಲಕ್ಷ್ಮೀ ಹೆಬ್ಬಾಳಕರ್ ಮತ್ತಷ್ಟು ಪಾಪ್ಯುಲರ್ ಆಗಬಹುದು ಎನ್ನುವ ಕಾರಣಕ್ಕಾಗಿಯೇ ಈ ಕಾರ್ಯಕ್ರಮ ಮೈಸೂರಿಗೆ ಶಿಪ್ಟ್ ಆಗಿದೆ ಎನ್ನಲಾಗಿದೆ.

ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದು….

ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಜುಲೈ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು. ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು. ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು..ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಸಚಿವರು ಹೇಳಿದರು.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *