Home / Breaking News / ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಓಪನ್

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಓಪನ್

ಬೆಂಗಳೂರು-ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *