Home / Breaking News / ಇಂದು ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟೀಂಗ್…

ಇಂದು ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟೀಂಗ್…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಬೆಳಗಾವಿ,ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರ ರೂಪಿಸಲು ಇಂದು ಬೆಳಗಾವಿ ನಗರದ ಸಂಕಮ್ ಹೊಟೇಲ್ ನಲ್ಲಿ ಬಿಜೆಪಿ ಕೋರ್ ಕಮೀಟಿ ಸಭೆ ನಡೆಯಲಿದೆ.

ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ಕೋರ್ ಕಮೀಟಿಯ ಸದಸ್ಯರು ಹಾಗೂ ಬೆಳಗಾವಿ ಜಿಲ್ಲೆಯ ಬಿಜೆಪಿಯ ಪ್ರಮುಖ ನಾಯಕರು ಮತ್ತು ಚುನಾವಣೆಯ ಬಿಜೆಪಿ ಉಸ್ತುವಾರಿ ಹೊಂದಿರುವ ರಾಜ್ಯದ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ಇಂದು ಸಂಜೆ ಬೆಳಗಾವಿಯ ಹೊಟೆಲ್ ಸಂಕಮ್ ನಲ್ಲಿ ನಡೆಯಲಿರುವ ಕೋರ್ ಕಮೀಟಿ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಹಾಲಿ,ಮಾಜಿ ಶಾಸಕರು ಹಾಲಿ,ಮಾಜಿ ಸಂಸದರು ಮತ್ತು ಬಿಜೆಪಿಯ ಪದಾಧಿಕಾರಿಗಳು ಭಾಗವಹಿಸಲಿದ್ದು ಬೆಳಗಾವಿ,ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಯ ಗೆಲುವಿಗಾಗಿ ತಂತ್ರ ರೂಪಿಸುವದಕ್ಕಾಗಿಯೇ ಸಭೆ ನಡೆಯಲಿದ್ದು ಸಭೆಯಲ್ಲಿ ಪ್ರಮುಖರು ತಮ್ಮ ಸಲಹೆ ಸೂಚನೆಗಳನ್ನು ಮಂಡಿಸಲಿದ್ದಾರೆ.

Check Also

ಚಾಕುವಿನಿಂದ ಇರಿದು, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್….

ಬೆಳಗಾವಿ: ಅಪ್ರಾಪ್ತ ಮಗಳಿಗೆ ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ತಂದೆಯೇ ಹತ್ಯೆ …

Leave a Reply

Your email address will not be published. Required fields are marked *