Breaking News
Home / Breaking News / ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಮನೆ,ಕಚೇರಿಗಳ ಮೇಲೆ ಐಟಿ ರೇಡ್

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಮನೆ,ಕಚೇರಿಗಳ ಮೇಲೆ ಐಟಿ ರೇಡ್

ಬೆಳಗಾವಿ –

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ,ಜಿಲ್ಲಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಹಾಗು ಲಖನ್ ಜಾರಕಿಹೊಳಿ ನಿವಾಸದ ಮೇಲೆ  ಏಕಕಾಲಕ್ಕೆ ದಾಳಿ ನಡೆಸಿದ್ದಾರೆ

ಬೆಳಗಾವಿ ನಗರದ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ ಮನೆ, ಜೊತೆಗೆ ಗೋಕಾಕಿನಲ್ಲಿರುವ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಅವರ ನಿವಾಸ ಹಾಗು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ,ಲಖನ್ ಜಾರಕಿಹೊಳಿ ಅವರ ನಿವಾಸದ ಮೇಲೆ ಐಟಿ ರೇಡ್ ಬಿದ್ದಿದೆ

ಏಕಕಾಲಕ್ಕೆ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮನೆಯಲ್ಲಿರುವ ಮತ್ತು ಅವರ ಕಚೇರಿಯಲ್ಲಿರುವ ದಾಖಲೆಗಳನ್ನು ಪೆಶೀಲನೆ ಮಾಡುತ್ತಿದ್ದಾರೆ

ಬೆಳಿಗ್ಗೆ ದಾಳಿ ಮಾಡಿರುವ ಅಧಿಕಾರಿಗಳು ನಿವಾಸದ ಎದುರು ಪೋಲೀಸರನ್ನು ನಿಯೋಜಿಸಿ ಒಳಗಡೆ  ದಾಖಲೆಗಳ ಪರಶೀಲನೆ ನಡೆಯುತ್ತಿದೆ

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *