ಬೆಳಗಾವಿ- ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೋಮವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲೇ ಮೊಕ್ಕಾಂ ಮಾಡಲಿದ್ದಾರೆ
ಸೋಮವಾರ ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ,ಮಂಗಳವಾರ ಬೆಳಿಗ್ಗೆ ಬೆಳಗಾವಿ ನಗರದಲ್ಲಿ ನಗರ ಪೋಲೀಸ್ ಆಯುಕ್ತರ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬೆಳಗಾವಿಯ RLS ಕಾಲೇಜಿನ ಹಿಂಬದಿಯಲ್ಲಿ ಪೋಲೀಸ್ ಲೈನ್ ನಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಸರ್ಕಾರ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರೂ ಸಹ,ಸ್ಥಳ ನಿಗದಿ ಮಾಡುವಲ್ಲಿ ವಿಳಂಬವಾಗಿತ್ತು. ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಕಟ್ಟಡ ಕಾಮಗಾರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಂಗಳವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ