Breaking News

ಮಹಿಳೆಗೆ ಎಳೆದಾಡಿದ ಘಟನೆ,ಕೆಟ್ಟ ಸಂಪ್ರದಾಯ…

ಗೋಕಾಕ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಮಹಾಲಿಂಗಪುರ ಪುರಸಭೆಗೆ ಸಂಬಂಧಿಸಿದಂತೆ ನಡೆದ ಘಟನೆಯು ಒಂದು ಕೆಟ್ಟ ಸಂಪ್ರದಾಯವಾಗಿದೆ. ಅಧ್ಯಕ್ಷೆ ಆಕಾಂಕ್ಷಿಯಾಗಿರುವ ಮಹಿಳೆಯನ್ನು ಎಳೆದಾಡಿ ಬಿಜೆಪಿ ಶಾಸಕ ಸಿದ್ದು ಸವದಿ ಸೇರಿದಂತೆ ಇತರರು ಅಸಭ್ಯ ವರ್ತನೆ ತೋರಿರುವುದು ಒಂದು ಕೆಟ್ಟ ಸಂಪ್ರದಾಯಾವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಿಕಿಹೊಳಿ ಹೇಳಿದ್ದಾರೆ.

ನಗರದ ಅವರ ಹೀಲ್ ಗಾರ್ಡನ್ ಕಛೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವುದನ್ನು ನಾವು ಖಂಡಿಸುತ್ತೇವೆ. ಈ ಸಂಬಂಧ ನಮ್ಮ ಪಕ್ಷ ಪ್ರತಿಭಟನೆ ನಡೆಸಲಿದೆ.

ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ಅಸಭ್ಯವಾಗಿ ನಡೆದುಕೊಂಡ ಎಲ್ಲಾರ ಮೇಲೂ ಪೊಲೀಸರು ಹಾಗೂ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *