ಬೆಳಗಾವಿ- ಪಂಚ ರಾಜ್ಯಗಳ ಚುನಾವಣೆ ಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವು ಸಾಧಿಸಿದ ಹಿನ್ನಲೆಯಲ್ಲಿ ಬೆಳಗಾವಿಯ ಬಿಜೆಪಿ ಕಾರ್ಯಕರ್ತರು ಮಾಜಿ ಶಾಸಕ ಅಭಯ ಪಾಟೀಲರ ನೇತ್ರತ್ವದಲ್ಲಿ ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದರು
ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಬಿಜೆಪ ಕಚೇರಿಯಲ್ಲಿ ಸಮಾವೇಶಗೊಂಡು ಕೇಸರಿ ಗುಲಾಲು ಹಾರಿಸಿ ಸಿಹಿ ಹಂಚಿ ಢೋಲ್ ತಾಶಾ ತಾಳಕ್ಕೆ ತಕ್ಕಂತೆ ಕುಣಿದು ಸಂಬ್ರಮಾಚರಿಸಿದರು
ಮಳಳಾ ಕಾರ್ಯಕರ್ತರು ಹರ.ಹರ.ಮೋದಿ ಎನ್ನುವ ಘೋಷಣೆಗಳನ್ನು ಕೂಗುತ್ತ ಕುಣಿಯುವ ಮೂಲಕ ಎಲ್ಲರ ಗಮನ ಸೆಳೆದರು ಹೋಳಿ ಹಬ್ಬಕ್ಕೆ ಇನ್ನೆರಡು ದಿನ ಬಾಕಿ ಇದ್ದರೂ ಬಿಜೆಪಿ ಕಾರ್ಯಕರ್ತರು ಕೇಸರಿ ಗುಲಾಲು ಹಾರಿಸಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು
ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಭಯ ಪಾಟೀಲ ಪಂಚ ರಾಜ್ಯಗಳ ಚುನಾವಣೆಯಲ್ಲಿ ರಾಜಕೀಯ ವಿರೋಧಿಗಳಿಗೆ ಪ್ರಧಾನಿ ಮೋದಿ ಅವರ ಸಾಧನೆಗಳು ಪಂಚ್ ಮಾಡಿವೆ ಪ್ರಧಾನಿಗಳು ದೇಶದ ಹಿತದಲ್ಲಿ ಕೈಗೊಂಡ ನಿರ್ಧಾರಗಳ ಗೆಲವು ಇದಾಗಿದೆ ಮೋದಿ ಅವರ ನೇತ್ರತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಅಭಯ ಪಾಟೀಲ ವಿಶ್ವಾಸ ವ್ಯೆಕ್ತಪಡಿಸಿದರು
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ