ಬೆಳಗಾವಿ-ವಿಧಾನಸಭೆಯಲ್ಲಿಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೋಟ್ಯಂತರ ರುಪಾಯಿ ಅವ್ಯವಹಾರ ಪ್ರಕರಣ ಪ್ರತಿಧ್ವನಿಸಿತು.
ಪ್ರಶ್ನೋತ್ತರ ವೇಳೆಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು, ವಿಟಿಯು ಅವ್ಯವಹಾರ ಪ್ರಸ್ತಾಪಿಸಿದಲ್ಲದೇ, ಈ ಪ್ರಕರಣ ಸಂಬಂಧ ಕೇಶವ ನಾರಾಯಣ ಮೂರ್ತಿ ವರದಿ ನೀಡಿದ್ದು,ಈ ವರದಿಯಲ್ಲಿ ಕಳಪೆ ಕಾಮಗಾರಿ ನಡೆದಿರುವ ಕುರಿತು ಉಲ್ಲೇಖಿಸಲಾಗಿದೆ ಎಂದು ಹೇಳಿದರು.
ಮಧ್ಯಪ್ರವೇಶಿಸಿದ ಬಾಗಲಕೋಟೆ ಶಾಸಕ ವೀರಣ್ಣ ಚರಂಚಿಮಠ ಅವರು, ಉತ್ತರ ಕರ್ನಾಟಕ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು, ಕೇಶವನಾರಾಯಣಮೂರ್ತಿ ಅವರ ವರದಿಯನ್ನು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.