ಬೆಳಗಾವಿ- ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ವಿಭಜಿಸುವದಿಲ್ಲ ಹಾಸನದಲ್ಲಿ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಮಾತ್ರ ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಶಾಸಕ ಅಭಯ ಪಾಟೀಲರಿಗೆ ಭರವಸೆ ನೀಡಿದ್ದಾರೆ
ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯವನ್ನು ವಿಭಜನೆ ಮಾಡುವ ನಿರ್ಧಾರವನ್ನು ಕೈಬಿಡುವಂತೆ ಉತ್ತರ ಕರ್ನಾಟಕ ಭಾಗದ 50 ಜನ ಶಾಸಕರು ಸಹಿ ಮಾಡಿದ ಮನವಿ ಅರ್ಪಿಸಲು ಸಿ ಎಂ ಬಳಿ ಶಾಸಕ ಅಭಯ ಪಾಟೀಲ ಮತ್ತು ಅನೀಲ ಬೆನಕೆ ಹೋದ ಸಂಧರ್ಭದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವ ವಿದ್ಯಾಲಯವನ್ನು ವಿಭಜನೆ ಮಾಡುವದಿಲ್ಲ ಈ ವಿಚಾರವನ್ನು ಇವತ್ತೆ ಸದನದಲ್ಲಿ ಘೋಷಣೆ ಮಾಡುತ್ತೇನೆ ಹಾಸನದಲ್ಲಿ ವಿಶ್ವ ವಿದ್ಯಾಲಯದ ಪ್ರಾದೇಶಿಕ ಕಚೇರಿನ್ನು ಮಾತ್ರ ಆರಂಭಿಸುತ್ತೇವೆ ಎಂದು ಸಿಎಂ ಕುಮಾರಸ್ವಾಮಿ ಅಭಯ ಪಾಟೀಲರಿಗೆ ಭರವಸೆ ನೀಡಿದ್ದಾರೆ ಎಂದು ಅಭಯ ಪಾಟೀಲ ತಿಳಿಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ