ಅಧಿಕಾರಕ್ಕಿಂತ ಪಕ್ಷ ದೊಡ್ಡದು-ಅಭಯ ಪಾಟೀಲ

ಬೆಳಗಾವಿ- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆಯೇ ಬಿಜೆಪಿ ಶಾಸಕರು ಒಬ್ಬೊಬ್ಬರಾಗಿ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ ಆದ್ರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ಅಧಿಕಾರಕ್ಕಿಂತ ಪಕ್ಷ ದೊಡ್ಡದು ಎಂದು ಹೇಳಿಕೆ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ .

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ,ರಾಜ್ಯದಲ್ಲಿ ಸಮರೋಪಾದಿಯಲ್ಲಿ ನೆರೆಪರಿಹಾರದ ಕಾಮಗಾರಿಗಳನ್ನು ನಡೆಸಿದ್ದಾರೆ.ಪ್ರವಾಹದಲ್ಲಿ ಸೂರು ಕಳೆದುಕೊಂಡಿರುವ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು,ಅವರ ಮೇಲೆ ಒತ್ತಡ ಇದೆ ,ಇಂತಹ ಸಂಧರ್ಭದಲ್ಲಿ ನನಗೂ ಮಂತ್ರಿ ಮಾಡಿ ಎಂದು ನಾನು ಒತ್ತಡ ಹೇರಿಲ್ಲ,ಒತ್ತಡ ಹೇರುವದೂ ಇಲ್ಲ ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ .

ಅಧಿಕಾರ ಇರಲಿ,ಬಿಡಲಿ ನಾನು ಯಾವತ್ತೂ ಜನರ ಮದ್ಯ ಇದ್ದುಕೊಂಡು ಸೇವೆ ಮಾಡುತ್ತಾ ಬಂದಿದ್ದೇನೆ ,ಅಧಿಕಾರ ಇದ್ರೆ ಮಾತ್ರ ಜನಸೇವೆ ಮಾಡಬೇಕು ಎನ್ನುವ ಜಾಯಮಾನ ನನ್ನದಲ್ಲ,ಅಧಿಕಾರಕ್ಕಾಗಿ ನಾನು ಎಂದಿಗೂ ಸೇವೆ ಮಾಡಿಲ್ಲ,ಅಧಿಕಾರಕ್ಕಿಂತ ಪಕ್ಷ ನಿಷ್ಠೆ ದೊಡ್ಡದು ಎಂದು ಕೆಲಸ ಮಾಡುತ್ತಾ ಬಂದಿದ್ದೇನೆ ,ಉಸಿರು ಇರೋವರೆಗೂ ನನ್ನನ್ನು ನಂಬಿದ ಕ್ಷೇತ್ರದ ಜನರ ಸೇವೆ ಮಾಡುತ್ತೇನೆ ಎಂದು ಅಭಯ ಪಾಟೀಲ ತಿಳಿಸಿದ್ದಾರೆ.

ಮಂತ್ರಿ ಸ್ಥಾನಕ್ಕೆ ನಾನು ಎಂದಿಗೂ ಲಾಭಿ ಮಾಡಲು ಹೋಗಿಲ್ಲ,ಪ್ರಾಮಾಣಿಕವಾಗಿ ಕೆಲಸ ಮಾಡುವ ನಾಯಕರನ್ನು ಪಕ್ಷ ಗುರುತಿಸುತ್ತದೆ ,ಎಂದು ನಂಬಿದ್ದೇನೆ ಪಕ್ಷದ ನಾಯಕರು ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು,ಪಕ್ಷ ಸಂಘಟನೆಯ ಕಾರ್ಯಗಳನ್ನು,ಸಾಮಾಜಿಕ,ಸಂಸ್ಕೃತಿಕ ಕಾರ್ಯಕ್ರಮ ಗಳನ್ನು ಗುರುತಿಸಿ ಒಂದು ದಿನ ನನಗೂ ಜವಾಬ್ದಾರಿ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ,ಆದ್ರೆ ಅಧಿಕಾರಕ್ಕಾಗಿ ಪಕ್ಷಕ್ಕೆ ಎಂದೂ ಮುಜುಗರ ಮಾಡುವದಿಲ್ಲ,ಸ್ವಾರ್ಥಕ್ಕಾಗಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವದಿಲ್ಲ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿಗಳು ಕೈಗೊಳ್ಳುವ ನಿರ್ದಾರವೇ ಅಂತಿಮ ಅವರಿಗೆ ಈ ವಿಷಯದಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ.ಎಂದು ಶಾಸಕ ಅಭಯ ಪಾಟೀಲ ಹೇಳಿಕೆ ನೀಡುವ ಮೂಲಕ ತಮ್ಮ ಪಕ್ಷ ನಿಷ್ಠೆಯನ್ನು ತೋರಿಸಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *