Breaking News

ಶಾಸಕ ಅಭಯ ಪಾಟೀಲ ಬೀಸಿದ ಚೆಂಡು ಈಗ ದೆಹಲಿ ಅಂಗಳದಲ್ಲಿ…!!

ಕೇಂದ್ರ ರಕ್ಷಣಾ ಸಚಿವರನ್ನ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

*ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸಲು ಮನವಿ*

ಬೆಳಗಾವಿಯ ಕೆಎಲ್ಇ ಹತ್ತಿರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನು ರಕ್ಷಣಾ ಇಲಾಖೆಯ ವಶದಲ್ಲಿದ್ದು ಈ ಜಮೀನು ರಾಜ್ಯಸರ್ಕಾರಕ್ಕೆ ವಾಪಸ್ ನೀಡುವಂತೆಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹತ್ತು ಹಲವಾರು ಬಾರಿ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ ಅವರು ಈ ವಿಚಾರವಾಗಿ ಈಗ ಕೇಂದ್ರದ ರಕ್ಷಣಾ ಸಚಿವರ ಗಮನ ಸೆಖೆದಿದ್ದಾರೆ.ಶಾಸಕ ಅಭಯ ಪಾಟೀಲ ಅವರು ಎರಡು ವರ್ಷದ ಹಿಂದೆ ಬಿತ್ತಿದ ಬೀಜ ಈಗ ಹೆಮ್ಮರವಾಗಿದ್ದು ಫಲ ಕೊಡುವ ಹೊಸ್ತಿಲಲ್ಲಿದೆ.

ನವದೆಹಲಿ, ನವೆಂಬರ್ 29 :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *