Breaking News

ಬೆಳಗಾವಿಯ ಕೇಬಲ್ ಕಾರ್ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್..

ಶಾಸಕ ಅಭಯ ಪಾಟೀಲ ಅವರ ಪ್ರಯತ್ನ ಸಾರ್ಥಕ*

ಬೆಳಗಾವಿ – ಬೆಳಗಾವಿ ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಶಾಸಕ ಅಭಯ ಪಾಟೀಲ ಯಶಸ್ವಿಯಾಗಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ,ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ ವರೆಗಿನ ಕೇಬಲ್ ಕಾರ್ ಅಳವಡಿಸಲು 60 ಕೋಟಿ ರೂ ಗಳ ಯೋಜನೆಗೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಅದಕ್ಕೆ ತಕ್ಷಣವೇ ಸ್ಪಂದಿಸಿದ ಕೇಂದ್ರ ಸಚಿವರು ಪರಶೀಲನೆ ಮಾಡಿ ತಕ್ಷಣ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಸೆಂಬರ್ ಒಳಗಾಗಿ ವರದಿ ಪಡೆದು ಅಗತ್ಯ ಅನುದಾನ ಬಿಡುಗಡೆ ಮಾಡಿ ಜನೇವರಿ ತಿಂಗಳ ನಂತರ ಕೇಬಲ್ ಕಾರ್ ಯೋಜನೆಯ ಕಾಮಗಾರಿ ಆರಂಭಿಸಲಾಗುವದು ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ.

ಈ ಯೋಜನೆಯ ಅನುಷ್ಠಾನದಿಂದ ಬೆಳಗಾವಿಯ ಮಹಾನಗರದ ಜನ ಎಂಜಾಯ್ ಮಾಡಲು ಯಳ್ಳೂರು ಪಿಕ್ನಿಕ್ ಪಾಯಿಂಟ್ ಆಗುವದರ ಜೊತೆಗೆ ಪಕ್ಕದ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪ್ರವಾಸಿಗರನ್ನು ಬೆಳಗಾವಿಯತ್ತ ಸೆಳೆಯಲು ಕೇಬಲ್ ಕಾರ್ ಪ್ರಮುಖ ಆಕರ್ಷಣೆಯಾಗಲಿದ್ದು,ಇದರಿಂದ ಬೆಳಗಾವಿಯ ಆರ್ಥಿಕ ವಹಿವಾಟು ಹೆಚ್ಚಳವಾಗಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *