ಬೆಳಗಾವಿ- ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲ ಮತ್ತು ಉತ್ತರದಿಂದ ಅನೀಲ ಬೆನಕೆ ಅವರ ಹೆಸರು ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದ್ದು ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಬಿಜೆಪಿಯ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ
ಬೆಳಗಾವಿ ದಕ್ಷಿಣದಿಂದ ಅಭಯ ಪಾಟೀಲರಿಗೆ ಬಿಜೆಪಿ ಟಿಕೆಟ್ ತಪ್ಪಿಸಲು ಬಿಜೆಪಿಯ ಒಂದು ಗುಂಪು ಕಸರತ್ತು ನಡೆಸಿತ್ತು ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಅಭಯ ಪಾಟೀಲರ ಹೆಸರನ್ನು ಅಂತಿಮಗೊಳಿಸಿದೆ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ
ಅತ್ಯಂತ ಕುತುಹಲ ಕೆರಳಿದಿದ್ದ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಕೊನೆಗೂ ಉತ್ತರ ಕಂಡು ಹಿಡಿದಿದ್ದು ಅನೀಲ ಬೆನಕೆ ಅವರು ಬೆಳಗಾವಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗುವದು ಖಚಿತವಾಗಿದ್ದು ಇಂದು ರಾತ್ರಿ ಅಥವಾ ನಾಳೆ ಯಾವುದೇ ಕ್ಷಣದಲ್ಲಿ ಬಿಜೆಪಿಯ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ
ಬೆಳಗಾವಿ ಉತ್ತರದಿಂದ ಅನೀಲ ಬೆನಕೆ,ಡಾ ರವಿ ಪಾಟೀಲ ಮತ್ತು ಕಿರಣ ಜಾಧವ ಅವರು ಬಿಜೆಪಿ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಸಿದ್ದರು ಕೊನೆ ಘಳಿಗೆಯಲ್ಲಿ ರಮೇಶ ಕತ್ತಿ ಅವರು ಉತ್ತರದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದರು
ಕಳೆದ ಬಾರಿ ಬಿಜೆಪಿ ಟಿಕೆಟ್ ನಿಂದ ವಂಚಿತರಾಗಿದ್ದ ಅನೀಲ ಬೆನಕೆ ಈ ಬಾರಿ ಬಿಜೆಪಿ ಟಿಕೆಟ್ ಗಿಟ್ಟಿದಿಕೊಳ್ಳುವದರಲ್ಲಿ ಯಶಸ್ವಿಯಾಗುತ್ತಾರೆಯೋ ಇಲ್ಲವೋ ಕಾದು ನೋಡಬೇಕಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ