Breaking News

ಶಾಸಕ ಅಭಯ ಪಾಟೀಲರ ಖಾಸಗಿ ನಿರ್ಣಯಕ್ಕೆ ಸರ್ಕಾರದಿಂದ ಅಭಯಹಸ್ತ….

ಶಾಸಕ ಅಭಯ ಪಾಟೀಲ ಮಂಡಿಸಿದ ಖಾಸಗಿ ನಿರ್ಣಯ ಅಂಗೀಕಾರವಾಗಿದೆ.ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಬೆಳಗಾವಿ ಭೇಟಿಯ ನೆನಪಿನ ಶತಮಾನೋತ್ಸವ ಕಾರ್ಯಕ್ರಮ ಆಚರಣೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಲಾಗಿದೆ.
***
ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು 1924ರ ಡಿಸೆಂಬರ್ 26 ರಂದು ಬೆಳಗಾವಿಗೆ ಭೇಟಿ ನೀಡಿ, ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಬರುವ ಡಿಸೆಂಬರ್ 26ಕ್ಕೆ ನೂರು ವರ್ಷಗಳು ಪೂರೈಸುತ್ತಿವೆ. ಈ ಸವಿ ನೆನಪಿಗಾಗಿ ರಾಜ್ಯ ಸರ್ಕಾರವು ಶತಮಾನೋತ್ಸವ ಸಂಭ್ರಮವನ್ನು ಆಚರಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಮತ್ತು ಭಾಗವಹಿಸಿದ ಸ್ಥಳವನ್ನು ಸ್ಮಾರಕವಾಗಿ ರೂಪಿಸಲು ಕ್ರಮವಹಿಸಬೇಕೆಂದು ಬೆಳಗಾವಿ ದಕ್ಷಿಣ ಕ್ಷೇತ್ರ ಶಾಸಕ ಅಭಯ ಪಾಟೀಲ ಅವರು ವಿಧಾನಸಭೆಯಲ್ಲಿಂದು ಖಾಸಗಿ ನಿರ್ಣಯ ಮಂಡಿಸಿದರು.

ಇದಕ್ಕೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಗಿ ಅವರು ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಬರುವ ಆಯವ್ಯಯದಲ್ಲಿ ವಿಶೇಷ ಅನುದಾನ ಪೂರೈಸಲು ಕ್ರಮವಹಿಸಲಾಗುವುದು ಮತ್ತು ಈ ಶತಮಾನೋತ್ಸವದ ಸವಿ ನೆನಪಿಗಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು. ಈ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರವು ನೆರವು ನೀಡಲು ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಚಿವರು ತಿಳಿಸಿದರು.
ಸದನವು ಖಾಸಗಿ ನಿರ್ಣಯವನ್ನು ಅಂಗೀಕರಿಸಿದೆ ಎಂದು ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ ಅವರು ಪ್ರಕಟಿಸಿದರು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *