Breaking News

ಬೆಳಗಾವಿ ಕ್ಲಬ್ ರಸ್ತೆಗೆ ಬಿ.ಶಂಕರಾನಂದ ಹೆಸರು ಪಾಲಿಕೆ ನಿರ್ಣಯ

 

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಇಂದು ನಾಮಕರಣದ ವಿಚಾರವಾಗಿ ಗಂಭೀರ ಚರ್ಚೆ ನಡೆಯಿತು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಬೆಳಗಾವಿಯ ಕ್ಲಬ್ ರಸ್ತೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ದಿವಂಗತ ಬಿ. ಶಂಕರಾನಂದ ಅವರ ಹೆಸರು ನಾಮಕರಣದ ವಿಚಾರವನ್ನು ಪ್ರಸ್ತಾಪಿಸಿ ಎಲ್ಲರ ಗಮನ ಸೆಳೆದರು.

ಶಾಸಕ ಅಭಯ ಪಾಟೀಲ ಅವರು ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಬಿ.ಶಂಕರಾನಂದ ಅವರ ಜನ್ಮ ಶತಮಾನೋತ್ಸವದ ಸಂಧರ್ಭದಲ್ಲಿ ಬೆಳಗಾವಿಯ ಕ್ಲಬ್ ರಸ್ತೆಗೆ ಅವರ ಹೆಸರು ನಾಮಕರಣ ಮಾಡುವ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಬಿಜೆಪಿಯ ಶಾಸಕ ಅಭಯ ಪಾಟೀಲ ಕಾಂಗ್ರೆಸ್ ಮುಖಂಡ ಬಿ.ಶಂಕರಾನಂದ ಅವರ ಹೆಸರು ಪ್ರಸ್ತಾಪಿಸಿದ್ದು ಅಚ್ಚರಿ ಮೂಡಿಸುವದರ ಜೊತೆಗೆ ಎಲ್ಲರ ಗಮನ ಸೆಳೆಯಿತು.

Check Also

ಬೆಳಗಾವಿ ಜಿಲ್ಲಾಧಿಕಾರಿಗಳ ಇದೊಂದು ಕಾರ್ಯ ಶ್ಲಾಘನೀಯ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರು ಮಾಡಿರುವ ಇದೊಂದು ಕಾರ್ಯ ಶ್ಲಾಘನೀಯ ಅದು ಏನಂದ್ರೆ ಸುವರ್ಣಸೌಧಕ್ಕೆ ಪಾಸ್ ಪಡೆದು …

Leave a Reply

Your email address will not be published. Required fields are marked *