ಬೆಳಗಾವಿ: ಜಿಲ್ಲೆಯಲ್ಲಿ ಶಿಥಿಲಾ ವ್ಯವಸ್ಥೆಯಲ್ಲಿರುವ ಸರಕಾರಿ ಶಾಲಾ ಕಾಲೇಜುಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಪ್ರತಿಷ್ಟಿತ ಸರಕಾರಿ ಶಿಕ್ಷಣ ಸಂಸ್ಥೆಗಳಾದ ಸರಸ್ವತಿ ಪ.ಪೂ ಕಾಲೇಜು, ಸರಕಾರಿ ಡಿಪ್ಲೋಮಾ ಕಾಲೇಜು ಹಾಗೂ ಸರಕಾರಿ ಬಿ.ಎಡ್ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಸರಿಯಾದ ಭೋದನಾ ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸರಕಾರಿ ಕಾಲೇಜುಗಳು ಸೊರಗುತ್ತಿವೆ ಅವುಗಳನ್ನು ದುರಸ್ಥಿಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಸರಕಾರಿ ಶಾಲಾ ಕಾಲೇಜುಗಳ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿವೆ. ಗೋಡೆಗಳು ಸಂಪೂರ್ಣ ಬಿರುಕು ಬಿಟ್ಟಿವೆ. ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಶಿಕ್ಷಣ ಕಲಿಯುವ ಪ್ರಸಂಗ ಎದುರಾಗಿದೆ. ಕೂಡಲೇ ಸಂಬಂಧ ಪಟ್ಟ ಇಲಾಖೆ ಹಾಗೂ ಶಾಸಕರು ಶಿಥಿಲಾವಸ್ಥೆಯಲ್ಲಿರುವ ಸರಕಾರಿ ಶಾಲಾ ಕಾಲೇಜುಗಳನ್ನು ಪುನರ್ ನಿರ್ಮಾಣ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ರೋಹಿತ ಉಮನಾಬಾದಿಮಠ, ಪೃಥ್ವಿ, ಸಚಿನ, ಅನಿಲ್, ವೆಂಕಟೇಶ, ಕಿರಣ, ಕಿಶೋರಿ ಪಾಟೀಲ, ಸ್ಪಂದನಾ ಸೇರಿದಂತೆ ಮೊದಲಾದವರು ಹಾಜರಿದ್ದರು