ಬೆಳಗಾವಿ
ನಿರ್ದೇಶಕರು ಹಾಗೂ ಸಚಿವರಿಲ್ಲದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯನ್ನು ಶೀಘ್ರದಲ್ಲಿಯೇ ಸರಿಪಡಿಸಬೇಕೆಂದು ಆಗ್ರಹಿಸಿ ಬುಧವಾರ ಎಬಿಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಸ್ಸೆಸ್ಸೆಲ್ಲಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ. ಈ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸುವುದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯದ್ದು, ಆದರೆ ಸರಕಾರದ ಒಳ ಒಗಳದಿಂದ ತೆರವಾದ ಸಚಿವ ಸ್ಥಾನವನ್ನು ಭರ್ತಿ ಮಾಡದೆ ಸಮ್ಮಿಶ್ರ ಸರಕಾರ ನಿರ್ಲಕ್ಷ್ಯ ಮಾಡಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಸರಕಾರ ಕೂಡಲೇ ಸಚಿವ ಹಾಗೂ ನಿರ್ದೇಶಕರನ್ನು ನೇಮಕ ಮಾಡಬೇಕು. ಕಿಂಗ್ ಪಿನ್ ಶಿವಕುಮಾರಗೆ ಸೂಕ್ತ ಶಿಕ್ಷೆ ವಿಧಿಸಿ ಇಂಥ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು. ಪಿಯುಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ವಿದ್ಯಾರ್ಥಿಗಳು, ಪೋಷಕರು ಆತಂಕದಲ್ಲಿ ಪರೀಕ್ಷೆಯನ್ನು ಎದುರು ನೋಡುವುದನ್ನು ಸರಕಾರ ತಪ್ಪಿಸಿ ಕಟ್ಟುನಿಟ್ಟಿನ ಕ್ರಮದೊಂದಿಗೆ ಪರೀಕ್ಷೆಯನ್ನು ನಡೆಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪೃದ್ವಿಕುಮಾರ, ಸಚೀನ ಹಿರೇಮಠ, ರೋಹಿತ ಉಮನಾಬಾದಿಮಠ, ವಿದ್ಯಾ ಪಾಟೀಲ, ಕಿಶೋರಿ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.