Breaking News

ಭೀಕರ ಅಪಘಾತ ಬೆಳಗಾವಿಯ ಐದು ಮಂದಿ ಸಾವು

ಬೆಳಗಾವಿ-ಭೀಕರ ರಸ್ತೆ ಅಪಘಾತ ಒಂದೇ ಕುಟುಂಬ 5 ಜನರ ಸಾವು, 11 ಮಂದಿಗೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ತಿರುಪತಿ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಬೆಳಗಿನ ಜಾವ ಈ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಐವರು ಮೃತಪಟ್ಟಿದ್ದಾರೆ.

ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ನಡೆದಿರುವ ಭೀಕರ ಅಪಘಾತ ಐವರನ್ನು ಬಲಿ ಪಡೆದಿದೆ.ತೆಲಂಗಾಣದ ಸೂರ್ಯಪೇಠ ಜಿಲ್ಲೆಯ ಮಠಮಪಲ್ಲಿಯಲ್ಲಿ ಈ ಅಪಘಾತ ಸಂಭವಿಸಿದೆ.ಇಂದು ಬೆಳಗಿನ ಜಾವ 3:30 ರ ಸುಮಾರಿಗೆ ಕಡಪ-ಚಿತ್ತೂರ ರಾಷ್ಟ್ರೀಯ ಹೆದ್ದಾರಿಯಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿರುವ11 ಜನರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದೆ ಕುಟುಂಬ ಒಟ್ಟು 16 ಜನ ತಿರುಪತಿ ದರ್ಶನಕ್ಕೆ ತೆರಳಿದ್ದರು,ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32),ಹನುಮಂತ ಆಜೂರ (42) ಚಾಲಕ ಹನುಮಂತ ಜಾಧವ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.ಕ್ರೂಸರ್ ವಾಹನ ಮಾಡಿಕೊಂಡು ಮೊದಲು ಶ್ರೀಶೈಲ ದರ್ಶನ ಪಡೆದು ಬಳಿಕ ತಿರುಪತಿಗೆ ತೆರಳಿದ್ದ 16 ಜನರ ಕುಟುಂಬ,ತಿರುಪತಿ ದರ್ಶನ ಮುಗಿಸಿಕೊಂಡು ರಾತ್ರಿ ವಾಪಸ್ ಆಗುತಿದ್ದಾಗ ಈ ದುರ್ಘಟನೆ ನಡೆದಿದೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *