ಬೆಳಗಾವಿ
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 6ನೇ ತಂಡದ ಪುರುಷ ವಿಶೇಷ ಮೀಸಲು ಪೊಲೀಸ್ ಕಾನ್ಸಟೇಬಲ್ ಪ್ರಶಿಕ್ಷಣಾರ್ಧಿಗಳ ನಿರ್ಗಮ ಪಥ ಸಂಚಲನದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭಾಗವಹಿಸಲಿದ್ದಾರೆ ಎಂದು ಕೆಎಸ್ ಆರ್ ಪಿ 2ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್ ಹೇಳಿದರು.
ಸೋಮವಾರ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಂಗಳವಾರ ಎಪಿಎಂಸಿ ರಸ್ತೆಯ ಕೆಎಸ್ ಆರ್ ಪಿ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಆಗಮಿಸಿ ಪಥ ಸಂಚಲನ ಪರಿವೀಕ್ಷಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರವೀಣ್ ಸೂದ್, ಕೆಎಸ್ ಆರ್ ಪಿಯ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ವಿವಿಧ ಮುಖಂಡರು ಭಾಗಿಯಾಗಲಿದ್ದಾರೆ ಎಂದರು.
ಮಂಗಳವಾರ ಸಂಜೆ 7 ರಿಂದ 9 ರ ವರೆಗೆ ಮಚ್ಚೆಯಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀದ್ ಪಡೆಯ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕೆಎಸ್ ಆರ್ ಪಿ ಎಡಿಜಿಪಿ ಅಲೋಕಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಕೆಎಸ್ ಆರ್ ಪಿ ಉತ್ಸವದ ಪ್ರಯುಕ್ತ ಮಂಗಳವಾರ ಬೆಳಗ್ಗೆ 7.30ಕ್ಕೆ ಕೆಎಸ್ ಆರ್ ಪಿ ಎಡಿಜಿಪಿ ಅಲೋಕಕುಮಾರ್ ನೇತೃತ್ವದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸುವರ್ಣ ವಿಧಾನ ಸೌಧದಿಂದ ಅಶೋಕ ವೃತ್ತ, ಆರ್ ಟಿಒ ವೃತ್ತ ಮೂಲಕ ಚನ್ನಮ್ಮ ವೃತ್ತಕ್ಕೆ ಆಗಮಿಸಿ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಪೀರನಾಡಿಗೆ ತಲುಪಲಿದೆ ಎಂದರು.
ಕೋವಿಡ್-19 ನಿಂದ ಸುಮಾರು 70 ಜನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಅದರಲ್ಲಿ ಒಬ್ಬ ಸಿಬ್ಬಂದಿ ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಸರಕಾರದಿಂದ 30 ಲಕ್ಷ ರು. ಪರಿಹಾರದ ಮೊತ್ತವನ್ನು ನೀಡಲಾಗುವುದು ಎಂದು ಹೇಳಿದರು.
ಸೋಮವಾರ ಸಂಜೆ 5 ರಿಂದ6 ವರೆಗೆ ಕೆಎಸ್ ಆರ್ ಪಿ ಎರಡನೇ ವಾದ್ಯವೃಂದದೊಂದಿಗೆ ವಿವಿಧ ಪಡೆಗಳಿಂದ ಸೈನಿಕ ಹಾಗೂ ಪೊಲೀಸ್ ಗೀತೆಗಳನ್ನು ನುಡಿಸಿ ಜರನ್ನು ರಂಜಿಸಲಿದ್ದಾರೆ ಎಂದರು.