Breaking News

ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಶ್ರೀಗಳು ಲಿಂಗೈಕ್ಯ.

ಬೆಳಗಾವಿ- ಕನ್ನಡದ ಮಠ ಎಂದೇ ಪ್ರಸಿದ್ದಿ ಪಡೆದಿರುವ ಬೆಳಗಾವಿ ಜಿಲ್ಲೆಯ ಚಿಂಚಣಿ ಮಠದ ಅಲ್ಲಮಪ್ರಭು ಶ್ರೀಗಳು ಇಂದು ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ.

ಅನಾರೋಗ್ಯದಿಂದ ಚಿಂಚಣಿ ಶ್ರೀಗಳು ಇಂದು ಲಿಂಗೈಕ್ಯರಾಗಿದ್ದು,ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಶ್ರೀಗಳು, ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು.

ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಾಕಾರಿಯಾಗದೆ ಇಂದು ಬೆಳಗಿನ ಜಾವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅಲ್ಲಮಪ್ರಭು ಸ್ವಾಮೀಜಿ.ಹಲವಾರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದಲ್ಲಿ ಇರುವ ಚಿಂಚಣಿ ಸಿದ್ದಪ್ರಭು ಸಂಸ್ಥಾನ ಮಠ ಇದಾಗಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *