Breaking News

ಮಗನ ಕಳೆದುಕೊಂಡ ಅಜ್ಜಿಗೆ ಲಕ್ಷ್ಮೀ ಕೃಪೆ….!!!

ಬೆಳಗಾವಿ-ಮಗನ ಕಳೆದುಕೊಂಡ ಭಾರವಾದ ತಾಯಿ ಹೃದಯಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮನ ಮಿಡಿದಿದ್ದಾರೆ.

ಚಿಕಿತ್ಸೆಗಾಗಿ ಮಗನನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿ,ಚಿಕಿತ್ಸೆ ಫಲಕಾರಿಯಾಗದೇ ಮಗನನ್ನು ಕಳೆದುಕೊಂಡು,ಮಗನ ಅಂತಿಮ ಸಂಸ್ಕಾರ ಮಾಡಲು ಸಾಧ್ಯವಾಗದೇ ಅಸಹಾಯಕಳಾಗಿ ನಂತರ ಮಾಜಿ ಮೇಯರ್ ವಿಜಯ ಮೋರೆ ಅವರ ಪುತ್ರ ಅಲೆನ್ ಮತ್ತು ಅವರ ಗೆಳೆಯರ ನೆರವಿನಿಂದ ಮಗನ ಅಂತ್ಯಸಂಸ್ಕಾರ ಮುಗಿಸಿ ಊರಿಗೆ ಹೋಗಿದ್ದ ತಾಯಿಯ ನೆರವಿಗೆ ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ ಆರ್ಥಿಕ ಸಹಾಯ ಮಾಡಿದ್ದಾರೆ.

ಒಂದು ವರ್ಷಕ್ಕೆ ಗೃಹಲಕ್ಷ್ಮೀ ಯೋಜನೆಯ ಮೂಲಕ ಜಮಾ ಆಗುವ ಒಟ್ಟು 24ಸಾವಿರ ರುಪಾಯಿ ಹಣದ ನೆರವಿನ ಹಸ್ತ ಚಾಚಿದ್ದಾರೆ. ಆಪ್ತರ ಮೂಲಕ ಹಣವನ್ನು ಮಹಿಳೆಯ ಸ್ವ ಗ್ರಾಮವಾದ ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮಕ್ಕೆ ಕೊಟ್ಟು ಕಳುಹಿಸಿದ್ದಾರೆ..

ಅಂತ್ಯಸಂಸ್ಕಾರ ಸಮಯದಲ್ಲಿ ಮಗನನ್ನು ಕಳೆದುಕೊಂಡ ತಾಯಿ ಅರಣ್ಯ ರೋಧನದ ದೃಶ್ಯ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋವನ್ನು ಗಮನಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು, ಅಂತ್ಯಸಂಸ್ಕಾರ ಮುಗಿಸಿ ಸ್ವ ಗ್ರಾಮ ಮರಕುಂಬಿಗೆ ಹೋಗಿದ್ದ ತಾಯಿಯ ನೆರವಿಗೆ ಧಾವಿಸಿ ಆರ್ಥಿಕ ಸಹಾಯ ಮಾಡಿದ್ದಾರೆ.

ಒಂದು ವರ್ಷಕ್ಕೆ ಗೃಹಲಕ್ಷ್ಮೀ ಯೋಜನೆಯ ಮೂಲಕ ಜಮಾ ಆಗುವ ಒಟ್ಟು ₹ 24 ಸಾವಿರ ಹಣದ ನೆರವಿನ ಹಸ್ತ ಚಾಚಿದ್ದಾರೆ. ತಮ್ಮ ಕಚೇರಿಯ ವಿಶೇಷ ಅಧಿಕಾರಿ ಜೆ.ಬಿ.ಬಾಗೋಜಿಕೊಪ್ಪ ಅವರ ಮೂಲಕ ಹಣವನ್ನು ಮಹಿಳೆಯ ಮನೆಗೆ ಕಳುಹಿಸಿದ್ದಾರೆ. ಅಲ್ಲದೇ ನೊಂದ ತಾಯಿಯೊಂದಿಗೆ ಕರೆ ಮೂಲಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ವಿಧಾನ ಪರಿಷತ್‌ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಸ್ವಾಂತ್ವಾನದ ಜತೆಗೆ ಆತ್ಮಸ್ಥೈರ್ಯವನ್ನು ತುಂಬಿದರು. ಸದಾಕಾಲವೂ ತಾಯಿಯ ಬೆನ್ನಿಗೆ ನಿಲ್ಲುವುದಾಗಿ ತಿಳಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ತಾಯಿ ಹೃದಕ್ಕೆಯ ನೊಂದ ಹಿರಿಯ ಜೀವ ಹರಿಸಿ ಹಾರೈಯಿಸಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆಯಂತೆ ವಿಶೇಷ ಅಧಿಕಾರಿ ಜೆ.ಬಿ.ಬಾಗೋಜಿಕೊಪ್ಪ ಅವರು 24 ಸಾವಿರ ಹಣವನ್ನು ನೊಂದ ಮಹಿಳೆಗೆ ಹಸ್ತಾಂತರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ. ಸಚಿವರು ತ್ವರಿತವಾಗಿ ಮನಮೀಡಿದು ಭಾರದವಾದ ತಾಯಿ ಹೃದಯಕ್ಕೆ ನೆರವಿನ ಹಸ್ತದ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *