*KMF ನಿರ್ದೇಶಕರಾದ ಶ್ರೀ ಅಮರ್ ನಾಥ್ ರಮೇಶ್ ಜಾರಕಿಹೊಳಿ ಅವರ ಹೇಳಿಕೆ*
ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು.
ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದೇನೆ.
ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ ಮಾಡುವ ಮನಸ್ಸಿದೆ.
ನನ್ನ ತಂದೆಯವರು ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
ಗೋಕಾಕ್ ಕ್ಷೇತ್ರದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ.
ಸನ್ಮಾನ್ಯ ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರೆಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಆಯ್ಕೆ ಮಾಡುವ ಜವಾಬ್ದಾರಿ ನನ್ನಂಥಹಾ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಟ್ರೋಲ್ ಆಗುತ್ತಿರುವ ವಿಷಯಗಳನ್ನು ಗಮನಿಸಿದ್ದೇನೆ.
ನನ್ನ ಸ್ನೇಹಿತರೂ, ಆಪ್ತರು ಮತ್ತು ಕಾರ್ಯಕರ್ತರ ಮನದಾಳವನ್ನು ಅರಿತಿದ್ದೇನೆ.
ರಾಜಕೀಯವಾಗಿ ಬೆಳೆಯಲು ನನಗೆ ಬೇಕಾದಷ್ಟು ಸಮಯವಿದೆ.
ದಿವಂಗತ ಸುರೇಶ್ ಅಂಗಡಿ ಅವರ ಕುಟುಂಬಕ್ಕೆ ಅನ್ಯಾಯವಾಗಲು ನಾವು ಬಿಡುವುದಿಲ್ಲ.
ಮತ್ತು ಯಾವುದೇ ಕಾರಣಕ್ಕೂ ಅಭ್ಯರ್ಥಿ ಆಗುವ ಮನಸ್ಸು ನನಗಿಲ್ಲ.
ನಾನು ಎಲ್ಲಾ ಕಾರ್ಯಕರ್ತರಂತೆ ಟೊಂಕ ಕಟ್ಟಿ ನಿಂತು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ. ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ್‌ದಯಾಳ್ ಉಪಾಧ್ಯಾಯರಂಥಹಾ ರಾಷ್ಟ್ರಭಕ್ತರು ಸ್ಥಾಪಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ನಾನು ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಅನ್ನಿಸುತ್ತದೆ.
ಕಾರ್ಯಕರ್ತರೆಲ್ಲಾ ಒಟ್ಟಾಗಿ ಕೆಲಸ ಮಾಡೋಣ ; ಪ್ರಧಾನಿ ಮೋದಿಯವರಿಗೆ ಇನ್ನಷ್ಟು ಶಕ್ತಿ ತುಂಬೋಣ.
ನಮಸ್ಕಾರ
*ಅಮರ್ ನಾಥ್ ರ. ಜಾರಕಿಹೊಳಿ*