ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ..
ಬೆಳಗಾವಿ- ಬೆಳಗಾವಿ ನಗರದಲ್ಲಿ ಸುಮಾರು ಮೂರು ವರ್ಷಗಳ ಕಾಲ ಕ್ರೈಂ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಅಮರನಾಥ ರೆಡ್ಡಿ ಅವರನ್ನು ಬೆಳಗಾವಿಯ ಅಡಿಶ್ನಲ್ ಎಸ್ ಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ
ಬೆಳಗಾವಿ ಜಿಲ್ಲಾ ಬ್ರಷ್ಟಾಚಾರ ನಿಗ್ರಹ ದಳದ (ACB) ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಅಮರನಾಥ ರೆಡ್ಡಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ
ಬೆಳಗಾವಿಯ ಎಸಿಬಿ ಎಸ್ ಪಿ ಯಾಗಿ , ಧಾರವಾಡದ ಡಿಸಿಪಿ ಬಿ.ಎಸ್.ನೇಮಗೌಡ ಅವರನ್ನು ನೇಮಕ ಮಾಡಲಾಗಿದೆ.
ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಚ್ಚುವರಿ ಎಸ್ಪಿ ರಾಮ್ ಅರಸಿದ್ದಿ ಅವರಿಗೆ ವಿಜಯಪುರ ಹೆಚ್ಚುವರಿ ಎಸ್ಪಿಯಾಗಿ ನೇಮಿಸಲಾಗಿದೆ.
ಬೆಳಗಾವಿ ಪೋಲೀಸ್ ವಿಭಾಗದಲ್ಲಿ ಮೇಜರ್ ಸರ್ಜರಿ ನಡೆದಿದ್ದು ಬೆಳಗಾವಿ ಜಿಲ್ಲೆಯ ಕುರಿತು ತಿಳಿದುಕೊಂಡಿರುವ ಅಮರನಾಥ ರೆಡ್ಡಿ ಬೆಳಗಾವಿ ಜಿಲ್ಲೆಯ ಅಡಿಶ್ನಲ್ ಎಸ್ ಪಿ ಯಾಗಿ ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ