ಬೆಳಗಾವಿ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ ಶಾ ಇಂದು ರಾತ್ರಿ ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ
ಇಂದು ರಾತ್ರಿ ವಿಶೇಷ ವಿಮಾನ ಮೂಲಕ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ಬೆಳಗಾವಿ ನಗರದಲ್ಲಿರುವ ಪಂಚತಾರಾ ಹೊಟೇಲ್ ಒಂದರಲ್ಲಿ ವಾಸ್ತವ್ಯ ಮಾಡಲಿದ್ದಾರೆ.ರಾತ್ರಿ ಬೆಳಗಾವಿ ಜಿಲ್ಲೆಯ ಪ್ರಮುಖ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಚುನಾವಣೆಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ
ನಾಳೆ ಬೆಳಿಗ್ಗೆ ಅಮೀತ ಶಾ ಮಹಾರಾಷ್ಟದ ಸಾಂಗಲಿ ಮಿರಜ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ