ಖಾನಾಪೂರ….ಅಭಿವೃದ್ಧಿ ಭರಪೂರ…!!!
ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ಸದ್ದಿಲ್ಲದೇ ಅಭಿವೃದ್ಧಿಯ ಹೊಳೆ ಹರಿಸುತ್ತಿದ್ದಾರೆ ಮಳೆಗಾಲದಲ್ಲಿ ಮಾತ್ರ ಈ ಕ್ಷೇತ್ರದಲ್ಲಿ ಮಹಾಪೂರ ಬರುತ್ತದೆ ಆದ್ರೆ ಅಂಜಲಿ ನಿಂಬಾಳ್ಕರ್ ಈ ಕ್ಷೇತ್ರದ ಶಾಸಕಿ ಆದಾಗಿನಿಂದ ಇಲ್ಲಿ ಅಭಿವೃದ್ಧಿಯ ಮಹಾಪೂರ ವರ್ಷದ ಹನ್ನೆರಡು ತಿಂಗಳು ಹರಿಯುತ್ತಿರುವದು ಸತ್ಯ
ಇತ್ತೀಚಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪೂರ ಪಟ್ಟಣಕ್ಕೆ ಮಂಜೂರಾಗಿರುವ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ 15 ಕೋಟಿ, ಕ್ಷೇತ್ರದ ಬೃಹತ್ ನೀರಾವರಿ ಯೋಜನೆಗಳಿಗೆ 40 ಕೋಟಿ ,ಖಾನಾಪೂರದಲ್ಲಿ ಹೈಟೆಕ್ ಬಸ್ ನಿಲ್ಧಾಣದ ನಿರ್ಮಾಣಕ್ಕೆ 8 ಕೋಟಿ ರೂಗಳ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಂಜಲಿ ನಿಂಬಾಳ್ಕರ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ .
ಖಾನಾಪೂರ ಕ್ಷೇತ್ರದ ಈ ಮೂರು ಮಹತ್ವದ ಯೋಜನೆಗಳಿಗೆ ಮಂಜೂರಾತಿ ದೊರೆತಿದೆ ಯೋಜನೆಗಳ ಅನುಷ್ಠಾನಕ್ಕೆ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಅಂಜಲಿ ನಿಂಬಾಳ್ಕರ್ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.
ಖಾನಾಪೂರ ಕ್ಷೇತ್ರದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ,ರಸ್ತೆಗಳ ದುರಸ್ಥಿ ಕಾರ್ಯ ನಡೆದಿದ್ದು ಖಾನಾಪೂರ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಬೇಕಿದೆ ,ರಸ್ತೆ,ಆರೋಗ್ಯ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಟ್ಟು ಕೆಲಸ ಮಾಡುತ್ತಿದ್ದೇನೆ ,ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಕ್ಷೇತ್ರದ ಜನರ ಹಿತಕ್ಕಾಗಿ ಹಗಲಿರಳು ಶ್ರಮಿಸುತ್ತೇನೆ, ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುತ್ತೇನೆ ಎಂದು ಅಂಜಲಿ ನಿಂಬಾಳ್ಕರ್ ಭರವಸೆ ನೀಡಿದ್ದಾರೆ.