ಬೆಳಗಾವಿ- ನವೆಂಬರ್ 6ರಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ,ಇಂದು ನಾಮ ಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದ್ದರಿಂದ,ಅನೇಕ ಜನ ಲೀಡರ್ ಗಳು ಇವತ್ತೇ ನಾಮಪತ್ರ ಸಲ್ಲಿಸಿ ಎಲ್ಲರ ಗಮನ ಸೆಳೆದರು
ಅದರಲ್ಲಿಯೂ ವಿಶೇಷವಾಗಿ ಖಾನಾಪುರ ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದಾರೆ.ಖಾನಾಪುರ ತಾಲೂಕಿನ ಪಿಕೆಪಿಎಸ್‌ಗಳನ್ನು ಪ್ರತಿನಿಧಿಸುವ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ,ಮಾದ್ಯಮಗಳ ಜೊತೆ ಮಾತನಾಡಿದ ಅವರು,ಸಹಕಾರ ಸಂಘದಲ್ಲಿ ಮೊದಲ ಬಾರಿ ಚುನಾವಣೆ ನಿಲ್ಲುತ್ತಿರುವೆ,ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ.ಯಾವುದೇ ಕಾರಣಕ್ಕೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.
ನನ್ನ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಎಂಇಎಸ್ ನಾಯಕರ ಜೊತೆಯೂ ಮಾತನಾಡಿದ್ದೇನೆ, ರೈತರ ಪರ ಕೆಲಸ ಮಾಡಿ ಸಹಕಾರಿ ಸಂಘಗಳಿಗೆ ಹೆಚ್ಚಿನ ಅನುದಾನ ತರುವ ಉದ್ದೇಶ ನನ್ನದಾಗಿದೆ. ಹೀಗಾಗಿ ನಾನು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ ಎಂದಿದ್ದಾರೆ.
ರಮೇಶ್ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಹಿನ್ನೆಲೆ ಅವರಿಂದ ಸಲಹೆ ಕೇಳಿದ್ದೆ,ಎಂದು ನಾಮಪತ್ರ ಸಲ್ಲಿಕೆ ಬಳಿಕ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದ್ದಾರೆ.